ಬೆಂಗಳೂರು: ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆ ಜಾವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ವಹಿಸಲಾಗಿದೆ.
ಹರ್ಷ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈಗ ಕೇಂದ್ರ ಗೃಹ ಇಲಾಖೆಯು ತನಿಖೆಯನ್ನು ಈಗ ಎನ್ಐಎಗೆ ವಹಿಸಿದೆ.
ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ಒಪ್ಪಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವೆ ಹಾಗೂ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಈ ಪ್ರಕರಣದಲಿ ಕೆಲ ಸಂಘಟನೆಗಳು ಭಾಗಿಯಾಗಿರುವ ಅನುಮಾನವಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದರು. ಅಲ್ಲದೆ ಮತ್ತೆ ಕಲೆವು ಸಂಘ-ಸಂಸ್ಥೆಗಳು ಈ ಬಗ್ಗೆ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಈಗ ಕೇಂದ್ರ ಗೃಹ ಇಲಾಖೆಯು ಈ ಪ್ರಕರಣವನ್ನು ಎನ್ ಐಎ ತನಿಖೆಗೆ ಒಪ್ಪಿಸಿದೆ.
ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷ ಅವರ ಮೇಲೆ ದುಷ್ಕರ್ಮಿಗಳು ಫೆಬ್ರವರಿ 20 ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದರು. ಈ ಪ್ರಕರಣವು ರಾಜ್ಯಾದ್ಯಂತ ಪ್ರತಿಭಟನೆಗೆ ಕಾರಣವಾಗಿತ್ತಲ್ಲದೆ, ಶಿವಮೊಗ್ಗ ಬಂದ್ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಲಾಗಿತ್ತು. ಹಾಗೂ ಕೆಲದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿತ್ತು.


ನಿಮ್ಮ ಕಾಮೆಂಟ್ ಬರೆಯಿರಿ