ತಮ್ಮೂರ ಜಾತ್ರೆಯಲ್ಲಿ ಗ್ರಾಮಸ್ಥರ ಜೊತೆ ವೀರಕುಣಿತಕ್ಕೆ ಹೆಜ್ಜೆ ಹಾಕಿ ಕುಣಿದ ಮಾಜಿ ಸಿಎಂ ಸಿದ್ದರಾಮಯ್ಯ; ವೀಡಿಯೊ ವೀಕ್ಷಿಸಿ

posted in: ರಾಜ್ಯ | 0

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮೂರ ಜಾತ್ರೆಯಲ್ಲಿ ಸ್ನೇಹಿತರೊಂದಿಗೆ ಹೆಜ್ಜೆಗೆ ಹೆಜ್ಜೆ ಹಾಕಿ ಕುಣಿದ ವೀಡಿಯೊ ವೈರಲ್ ಆಗಿದೆ.

ಸಿದ್ದರಾಮಯ್ಯ ಅವರು ಸ್ವಗ್ರಾಮ ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮ ತಾಯಿ ಜಾತ್ರಾ ಮಹೋತ್ಸವದಲ್ಲಿ ಗುರುವಾರ ಭಾಗವಹಿಸಿ ಶ್ರೀ ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

ಗ್ರಾಮಸ್ಥರೊಂದಿಗೆ ಮೊದಲಿನಿಂದಲೂ ನಿಕಟ ಬಾಂಧವ್ಯ ಇರಿಸಿಕೊಂಡಿದ್ದೇನೆ. ಜಾತ್ರೆಯಲ್ಲಿ ಯಾವಾಗಲೂ ಪಾಲ್ಗೊಳ್ಳುತ್ತೇನೆ. ಹಿಂದೆ ಸಚಿವನಾಗಿದ್ದಾಗಲೂ ಬಂದಿದ್ದೆ, ಮುಖ್ಯಮಂತ್ರಿಯಾಗಿದ್ದಾಗಲೂ ಬಂದಿದ್ದೆ, ಈಗಲೂ ಬಂದಿದ್ದೇನೆ. ಹಿಂದೆ ಎರಡು ವರ್ಷಗಳಿಗೊಮ್ಮೆ ಜಾತ್ರೆ ನಡೆಯುತ್ತಿತ್ತು. ಬಳಿಕ ಮೂರು ವರ್ಷಗಳಿಗೊಮ್ಮೆ ಆಗುತ್ತ ಬಂತು. ಆದರೆ ಕೋವಿಡ್ ಬಂದಿದ್ದ ಕಾರಣ ಕಳೆದ ವರ್ಷ ಜಾತ್ರೆ ಮಾಡಿರಲಿಲ್ಲ. ಈ ವರ್ಷ ಮಾಡುತ್ತಿದ್ದಾರೆ. ಜಾತ್ರೆಗೆ ನೆಂಟರಿಷ್ಟರು, ಗೆಳೆಯರು ಬರುತ್ತಾರೆ. ಹೀಗಾಗಿ ಜಾತ್ರೆಗೆ ಬರುವುದು ಎಂದು ಸಿದ್ದರಾಮಯ್ಯ ಹೇಳಿದರು.
ಮನೆಯಿಂದ ಕಾಲುನಡಿಗೆಯಲ್ಲಿಯೇ ದೇವಸ್ಥಾನಕ್ಕೆ ಆಗಮಿಸಿದ ಸಿದ್ದರಾಮಯ್ಯ ಸಿದ್ದರಾಮೇಶ್ವರನಿಗೆ ಪೂಜೆ ಸಲ್ಲಿಸಿದರು. ಜಾತ್ರಾ ಮಹೋತ್ಸವದಲ್ಲಿ ಸ್ನೇಹಿತರು, ಬೆಂಬಲಿಗರ ಅರ್ಧಗಂಟೆಗೂ ಹೆಚ್ಚು ಕಾಲ ಕುಣಿದರು.

ಓದಿರಿ :-   ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 32 ಶೈಕ್ಷಣಿಕ ಜಿಲ್ಲೆಗೆ ಎ ಗ್ರೇಡ್, ಮೊದಲನೇ ಸ್ಥಾನ ಹಂಚಿಕೊಂಡ 145 ವಿದ್ಯಾರ್ಥಿಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ