ಬೆಳಗಾವಿ : ಹಾಡಹಗಲೇ ನಡುರಸ್ತೆಯಲ್ಲಿ ಹೆಂಡತಿಯನ್ನು ಕೊಚ್ಚಿ ಕೊಲೆಗೈದ ಗಂಡ

posted in: ರಾಜ್ಯ | 0

ಬೆಳಗಾವಿ: ವಿಚ್ಛೇದನ ನೀಡಲು ಮುಂದಾದ ಪತ್ನಿಯನ್ನು ಪತಿಯೇ ಹಾಡಹಗಲೇ ನಡುರಸ್ತೆಯಲ್ಲೇ ಸಾರ್ವಜನಿಕವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ನಗರದ ಕೋಟೆ ಕೆರೆ ಬಳಿ ಶುಕ್ರವಾರ ನಡೆದಿದೆ.
ಹೀನಾ ಕೌಸರ್ (24) ಎಂಬ ಮಹಿಳೆ ಹತ್ಯೆಗೀಡಾಗಿದ್ದು, ಪತಿ ಮಂಜೂರ್ ಇಲಾಹಿ (34) ಎಂಬಾತನನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾರಕಾಸ್ತ್ರದಿಂದ ಪತ್ನಿಯನ್ನು ಕೊಚ್ಚಿ ಕೊಂದ ಬಳಿ ಆರೋಪಿಯು ಅಲ್ಲಯೇ ನಿಂತಿದ್ದ ಎನ್ನಲಾಗಿದೆ.

ಮಾರಕಾಸ್ತ್ರಗಳಿಂದ ದಾಳಿ ನಡೆದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಹೀನಾ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾಳೆ.
ನಾಲ್ಕು ವರ್ಷಗಳ ಹಿಂದೆ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಮಂಜೂರ್ ಜೊತೆ ವಿವಾಹವಾಗಿದ್ದ ಹೀನಾ ಎಂಟು ತಿಂಗಳ ಹಿಂದೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ಇಂದು, ಶುಕ್ರವಾರ ಕೋರ್ಟ್‌ಗೆ ಹಾಜರಾಗಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಪತಿ ರೊಚ್ಚಿಗೆದ್ದು ಜನನಿಬಿಡ ಪ್ರದೇಶದಲ್ಲೇ ಈ ದುಷ್ಕೃತ್ಯ ಎಸಗಿದ್ದಾನೆ.
ಸ್ಥಳಕ್ಕೆ ಡಿಸಿಪಿ ರವೀಂದ್ರ ಸೇರಿ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಓದಿರಿ :-   ಶಿವಮೊಗ್ಗದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ತಾಯಿ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ