ಪ್ರತಿ ವರ್ಷ ಮಾರ್ಚ್ 16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ :ಸರ್ಕಾರದಿಂದ ಆದೇಶ

ಬೆಂಗಳೂರು: ಜಗದ್ಗುರು ಶ್ರೀರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ರಾಜ್ಯಾದ್ಯಂತ ಪ್ರತಿವರ್ಷ ಮಾರ್ಚ್ 16ರಂದು ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ಈ ಸಂಬಂಧ ಇಂದು, ಶುಕ್ರವಾರ ಆದೇಶ ಹೊರಡಿಸಲಾಗಿದೆ. ಜಗದ್ಗುರು ಶ್ರೀರೇಣುಕಾಚಾರ್ಯರು ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.
ಮನವಿಯ ಹಿನ್ನೆಲೆಯಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆರೋಗ್ಯದಲ್ಲಿ ಏರುಪೇರು : ಸಚಿವ ಜಮೀರ್‌ ಅಹ್ಮದ್‌ ಆಸ್ಪತ್ರೆಗೆ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement