ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ : ಸಿದ್ದರಾಮಯ್ಯ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಚುನಾವಣಾ ರಾಜಕಾರಣದಿಂದ ನಾನು ನಿವೃತ್ತಿ ಪಡೆದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದರು.

ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಹೀಗೆ ಎಲ್ಲ ಕ್ಷೇತ್ರದ ಜನರೂ ನನ್ನನ್ನು ಆಹ್ವಾನಿಸಿದ್ದಾರೆ. ಆದರೆ ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ನನಗೆ ರಾಜಕೀಯವಾಗಿ ಜನ್ಮಕೊಟ್ಟ ಚಾಮುಂಡೇಶ್ವರಿ ಕ್ಷೇತ್ರದ ಜನರೇ ನನ್ನನ್ನು ಸೋಲಿಸಿದರು. ಆದರೆ ನಾನು ಅದಕ್ಕೆ ಬೇಸರ ಮಾಡಿಕೊಳ್ಳುವುದಿಲ್ಲ. ಯಾಕೆಂದರೆ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ. ಅದಕ್ಕಾಗಿ ಚಾಮುಂಡೇಶ್ವರಿ ಕ್ಷೇತ್ರವನ್ನು ನಾನು ಎಂದಿಗೂ ಮರೆಯುವುದಿಲ್ಲ. ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆಯಾಗಲಿದ್ದು, ಮತ್ತೆ ಚುನಾವಣಾ ರಾಜಕಾರಣ ಮಾಡುವುದಿಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement