ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಲ್ವಾ, ಮುಸ್ಲಿಂ ಹೆಣ್ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ, ನಿಮಗೇನು ತೊಂದರೆ: ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ‘ಕೆಲವೆಡೆ ಹಿಂದೂ ಹೆಣ್ಣು ಮಕ್ಕಳು ಹಾಗೂ ಜೈನ ಹೆಣ್ಣುಮಕ್ಕಳು ತಲೆ ಮೇಲೆ ಸೆರಗು ಹಾಕುವುದಿಲ್ಲವಾ? ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕುವುದಿಲ್ಲವೇ? ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ ಬಿಡಿ,. ಅದರಿಂದ ನಿಮಗೇನು ತೊಂದರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಸ್ಲಿಂ ಹೆಣ್ಣುಮಕ್ಕಳು ಸಮವಸ್ತ್ರದ ಬಣ್ಣದ ದುಪ್ಪಟ್ಟಾ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಕೇಳುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಹಿಜಾಬ್‌ ವಿವಾದ ಸೃಷ್ಟಿಸಿದ್ದೇ ಬಿಜೆಪಿಯವರು. ಸಂಬಂಧಪಟ್ಟವರನ್ನು ಕರೆದು ಚರ್ಚಿಸಿ ವಿವಾದಕ್ಕೆ ತೆರೆ ಎಳೆಯಬಹುದಿತ್ತು. ಆದರೆ ಉದ್ದೇಶಪೂರ್ವಕವಾಗಿ ಈ ವಿವಾದವನ್ನು ದೊಡ್ಡದು ಮಾಡಿದ್ದಾರೆ ಎಂದು ಆರೋಪಿಸಿದರು.
ಜಾತ್ರೆಗಳಲ್ಲಿ ಮುಸ್ಲಿಮರಿಗೆ ವ್ಯಾಪಾರ ಮಾಡಲು ನಿರ್ಬಂಧ ಹೇರುತ್ತಿರುವುದು ಅಮಾನವೀಯ ಕ್ರಮ. ಜಾತ್ರೆಗಳಲ್ಲಿ ಯಾರು ಬೇಕಾದರೂ ವ್ಯಾಪಾರ ಮಾಡಬಹುದು. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಮುಸ್ಲಿಂ ವರ್ತಕರನ್ನು ಬಹಿಷ್ಕರಿಸುವಂತೆ ವಿವಿಧ ಸಂಘಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವುದೇ ಬಿಜೆಪಿ ಎಂದು ಆರೋಪಿಸಿದರು.
ರಕ್ತದ ಅಗತ್ಯ ಬಿದ್ದಾಗ ಯಾವುದೇ ಜಾತಿಯವನ ರಕ್ತವನ್ನಾದರೂ ದೇಹಕ್ಕೆ ಸೇರಿಸಿಕೊಳ್ಳುತ್ತೇವೆ. ಅದೇರೀತಿ ನಮಗೆ ಬೇಕಿರುವುದು ಮನುಷ್ವತ್ವ ಎಂದು ಹೇಳಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement