ಹುಬ್ಬಳ್ಳಿ: ಸರ್ಕಾರದ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ 5ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆಗೆ ಪ್ಲಾನ್ ರೂಪಿಸಲಾಗಿದೆ.ಇದಲ್ಲದೆ ಏಪ್ರಿಲ್ 1ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸಹಕಾರ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
advertisement
9535127775 / 9901837775 / 6364528715 / 08362775155 / https://icsmpucollege.com/
ಏಪ್ರಿಲ್ 1ರಂದು ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಯಶಸ್ಸಿನಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಕ್ಷೀರಾಭಿವೃದ್ಧಿ ಬ್ಯಾಂಕ್ ಆರಂಭಿಸಲಾಗುತ್ತಿದೆ. ಏಪ್ರಿಲ್ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡುವ ಸಾಧ್ಯತೆಯಿದೆ’ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ‘ಅಮಿತ್ ಶಾ ಸರ್ಕಾರದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುತ್ತಿರುವುದರಿಂದ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುವುದಿಲ್ಲ. ವರಿಷ್ಠರು ಕರೆದಾಗ ದೆಹಲಿಗೆ ಹೋಗಿ ಈ ಕುರಿತು ಚರ್ಚೆ ಮಾಡುತ್ತೇನೆ ಎಂದು ಉತ್ತರಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ