ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಸಮವಸ್ತ್ರ ಕಡ್ಡಾಯ:ಸರ್ಕಾರದ ಆದೇಶ-ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.
ಸೋಮವಾರಮಾರ್ಚ್ 28ರಿಂದ ಎಪ್ರಿಲ್ 11ರ ವರೆಗೆ ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರ ಧರಿಸಿ ಕೇಂದ್ರಕ್ಕೆ ಬರಬೇಕು ಎಂದು ಅಧಿಕೃತ ಸುತ್ತೋಲೆ ಹೊರಡಿಸಿದೆ.
ಸುತ್ತೋಲೆಯಲ್ಲಿ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿದ್ದು, ವಿದ್ಯಾರ್ಥಿಗಳು ಸರ್ಕಾರ ನಿಗದಿಪಡಿಸಿದ ಸಮವಸ್ತ್ರ ಮಾತ್ರ ಧರಿಸಿ ಬರಬೇಕು. ಖಾಸಗಿ ಶಾಲೆಗಳಲ್ಲಿ ಆಡಳಿತ ಮಂಡಳಿ ನಿಗದಿ ಪಡಿಸಿದ ಸಮವಸ್ತ್ರ ಧರಿಸಿ ಬರಬೇಕು ಎಂದು ತಿಳಿಸಲಾಗಿದೆ.

ಶಿಕ್ಷಣ ಇಲಾಖೆ ನಿರ್ಧಾರವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಸ್ವಾಗತಿಸಿದ್ದು, ಸಮವಸ್ತ್ರ ಇರುವ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ತೀರ್ಪು ನೀಡಿದೆ. ತೀರ್ಪು ಜಾರಿಯಲ್ಲಿ ಇರುವುದರಿಂದ ಯಾರೇ ಹಿಜಾಬ್ ಧರಿಸಿ ಪರೀಕ್ಷೆಗೆ ಆಗಮಿಸಿದರೂ ಅವರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement