ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ : ವಿಶ್ವ ಹಿಂದೂ ಪರಿಷತ್‌ ಒತ್ತಾಯ

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿರುವ ಸಲಾಂ ಮಹಾಮಂಗಳಾರತಿಯ ಹೆಸರನ್ನು ತೆಗೆಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಮನವಿ ಸಲ್ಲಿಸಿದೆ.
ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಹೆಸರು ಬದಲಾಯಿಸುವಂತೆ ದೇವಾಲಯದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರ. ಭಾರತದ 108 ಶಕ್ತಿ ಪೀಠಗಳಲ್ಲಿ ಒಂದು. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ ಆದಿ ಶಂಕರಾಚಾರ್ಯರು ಮೂಕಾಂಬಿಕಾ ತಾಯಿಯನ್ನು ಇಲ್ಲಿ ನೆಲೆಗೊಳಿಸಿದ್ದಾರೆ. ಮೂಕಾಂಬಿಕಾ ತಾಯಿಯು ದುರ್ಗೆ, ಸರಸ್ವತಿ ಮತ್ತು ಮಹಾಲಕ್ಷ್ಮಿಯ ಒಂದು ಅವತಾರ, ಮೂಕಾಂಬಿಕಾ ದೇವಿಯ ದೇವಸ್ಥಾನದಲ್ಲಿ ಕೋಟ್ಯಂತರ ಭಕ್ತರು ಅತೀವ ನಂಬಿಕೆ ಇರಿಸಿಕೊಂಡಿದ್ದಾರೆ. ಇಂತಹ ಪುಣ್ಯ ಕ್ಷೇತ್ರದಲ್ಲಿ ಒಬ್ಬ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ಕನ್ನಡ ವಿರೋಧಿ ಸಾವಿರಾರು ಹಿಂದುಗಳನ್ನು ನರಮೇಧ ಮಾಡಿ, ನೂರಾರು ದೇವಸ್ಥಾನಗಳನ್ನು ಧ್ವಂಸಗೊಳಿಸಿದ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ರಾತ್ರಿ 8 ಗಂಟೆಗೆ ದೇವಿ ಮೂಕಾಂಬಿಕೆಗೆ ಸಲಾಂ ಎಂಬ ಹೆಸರಿನಲ್ಲಿ ಮಹಾಮಂಗಳಾರತಿಯಾಗುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿಯುಂಟು ಮಾಡಿದೆ. ಇದು ಗುಲಾಮಗಿರಿಯ ಸಂಕೇತವಾಗಿದೆ. ಹೀಗಾಗಿ ತಕ್ಷಣ ಕ್ಷೇತ್ರದ ವ್ಯವಸ್ಥಾಪನಾ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸಲಾಂ ಹಸರನ್ನು ತೆಗೆದು ಕೇವಲ ದೇವರ ಹೆಸರಲ್ಲಿ ಮಹಾಮಂಗಳಾರತಿ ಮಾಡಲು ಕ್ರಮ ತೆಗೆದುಕೊಳ್ಳಬೇಕೆಂದು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸುತ್ತದೆ.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ, ಕಾರ್ಯ ನಿರ್ವಹಣಾಧಿಕಾರಿಗಳಿಗೆ, ದತ್ತಿ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆಯವರಿಗೆ, ಜಿಲ್ಲಾಧಿಕಾರಿಗಳಿಗೆ, ದತ್ತಿ ಇಲಾಖೆ ಆಯುಕ್ತರಾದ ರೋಹಿಣಿ ಸಿಂಧೂರಿಯವರಿಗೆ ಮನವಿ ಸಲ್ಲಿಸಿದ್ದು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಟಿಪ್ಪು ಸುಲ್ತಾನ್ ಭೇಟಿ ಬಳಿಕ ಇಂದಿನವರೆಗೂ ಪ್ರತಿ ದಿನ ರಾತ್ರಿ 8 ರಿಂದ 8:15ರ ನಡುವೆ ಪರಿವಾರ ದೇವತೆಗಳ ಪೂಜೆ ಬಳಿಕ ನಡೆಯುವ ಮಂಗಳಾರತಿ (ಸುತ್ತು ಸಲಾಂ) ಪೂಜೆಗೆ ಸಲಾಂ ಮಂಗಳಾರತಿ ಎಂಬ ಹೆಸರಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement