ಬಜೆಟ್ ಘೋಷಣೆಗಳ ಪರಿಣಾಂಕಾರಿ ಅನುಷ್ಠಾನಕ್ಕೆ ಇದೇ ಮೊದಲ ಬಾರಿಗೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಬಜೆಟ್ ಘೋಷಣೆಗಳ ಶೀಘ್ರ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಲ್ಲ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ನಲ್ಲಿನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶ ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನು ಈ ಸಮಿತಿ ಮಾಡಲಿದೆ ಎಂದು ಅವರು ಹೇಳಿದರು.
ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವುದು ಹಾಗೂ ಒಂದೇ ಬಾರಿಗೆ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಮಿತಿ ರಚಿಸಲಾಗಿದೆ. ಬಜೆಟ್‍ನಲ್ಲಿ ಘೋಷಿಸಿರುವ ಹೊಸ ಯೋಜನೆಗಳನ್ನು ವೇಗವಾಗಿ ಅನುಷ್ಠಾನಗೊಳಿಸಲು ಇಲಾಖೆಗಳಿಗೆ ಸೂಚನೆಯನ್ನೂ ನೀಡಲಾಗಿದೆ ಎಂದು ತಿಳಿಸಿದರು.
ಕಳೆದ ಮೂರು ತ್ರೈ ಮಾಸಿಕಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಇದು ವಿದೇಶಿ ಹೂಡಿಕೆದಾರರಿಗೆ ನಮ್ಮ ರಾಜ್ಯದ ಮೇಲಿರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement