ಕಂದಕಕ್ಕೆ ಉರುಳಿದ ಬಸ್: 7 ಸಾವು, 45 ಮಂದಿಗೆ ಗಾಯ

ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ-ತಿರುಪತಿ ಹೆದ್ದಾರಿಯ ಬಳಿಯ ಬಕರಾಪೇಟ ಕಣುಮಾದಲ್ಲಿ ಶನಿವಾರ ರಾತ್ರಿ 11.30 ರ ಸುಮಾರಿಗೆ ಸಂಭವಿಸಿದ ದುರ್ಘಟನೆಯಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವಿಗೀಡಾಗಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಮಾಲಿಶೆಟ್ಟಿ ವೆಂಗಪ್ಪ (60), ಮಾಲಿಶೆಟ್ಟಿ ಮುರಳಿ (45), ಕಾಂತಮ್ಮ (40), ಮಾಲಿಶೆಟ್ಟಿ ಗಣೇಶ್ (40), ಜೆ. ಯಶಸ್ವಿನಿ (8), ಚಾಲಕ ನಬಿ ರಸೂಲ್ ಮತ್ತು ಕ್ಲೀನರ್ ಎಂದು ಗುರುತಿಸಲಾಗಿದೆ.
ಬಸ್ ನಲ್ಲಿ 63 ಮಂದಿ ಪ್ರಯಾಣಿಕರಿದ್ದರು. ಎಲ್ಲರೂ ತಿರುಚಾನೂರಿನಲ್ಲಿ ಭಾನುವಾರ ಬೆಳಗ್ಗೆ ನಡೆಯಲಿದ್ದ ಮದುವೆ ನಿಶ್ಚಿತಾರ್ಥಕ್ಕೆ ಸಾಗುತ್ತಿದ್ದರು. ಘಾಟ್ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಬಸ್ ಅಡುಪುತಪ್ಪಿ ಕಣಿವೆಗೆ ಬಿದ್ದಿದೆ. ಚಾಲಕನ ಅತಿವೇಗದ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ. ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ, ಸುಮಾರು 100 ಅಡಿಯ ಕಣಿವೆಗೆ ಉರುಳಿದೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ತತ್ ಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement