ನಾಳೆಯಿಂದ `ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಮಾಹಿತಿ ಇಲ್ಲಿದೆ

posted in: ರಾಜ್ಯ | 0

ಬೆಂಗಳೂರು : ಸೋಮವಾರ ಮಾರ್ಚ್ 28 ರಿಂದ ಏಪ್ರಿಲ್ 11ರ ವರೆಗೆ ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ’ ಪರೀಕ್ಷೆ ಆರಂಭವಾಗಲಿದೆ. ರಾಜ್ಯದ 15,387 ಶಾಲೆಗಳ 8,73,846 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಪರೀಕ್ಷೆ ಬರೆಯಲು 45,289 ಪರೀಕ್ಷಾ ಕೊಠಡಿಗಳನ್ನು ಸಿದ್ಧತೆ ಮಾಡಲಾಗಿದೆ.
3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯಲಿದ್ದು, 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ.
ಪರೀಕ್ಷೆ ಬರೆಯಲಿರುವ ಒಟ್ಟು 8,73,846 ವಿದ್ಯಾರ್ಥಿಗಳ ಪೈಕಿ 4,52,732 ಗಂಡು ಮಕ್ಕಳು ಹಾಗೂ 4,21,110 ಹೆಣ್ಣು ಮಕ್ಕಳಿದ್ದಾರೆ. 04 ಜನ ತೃತಿಯ ಲಿಂಗಿಗಳು ಈ ಬಾರಿ ಪರೀಕ್ಷೆ ಎದುರಿಸುತ್ತಿದ್ದಾರೆ.

ಮುಂಚಿತವಾಗಿ ಪರೀಕ್ಷಾ ಕೊಠಡಿಯ ಮಾಹಿತಿ
ಎಸ್‌ಎಸ್‌ಎಲ್ ಸಿ (SSLC) ಪರೀಕ್ಷೆಯ ಮತ್ತೊಂದು ವಿಶೇಷತೆಯೆಂದರೆ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕೊಠಡಿಯ ಮಾಹಿತಿಯನ್ನು ಮುಂಚಿತವಾಗಿ ಎಸ್‌ಎಂಎಸ್ (SMS) ಮೂಲಕ ತಿಳಿಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ. ಮುಂಚಿತವಾಗಿ ವಿದ್ಯಾರ್ಥಿಗಳ ಪಾಲಕರ ಮೊಬೈಲ್ ಫೋನ್ ಗಳಿಗೆ ಎಸ್‌ಎಂಎಸ್ ಅಥವಾ ವಾಟ್ಸ್ ಆಯಪ್ ಮೂಲಕ ಕೊಠಡಿಯ ಮಾಹಿತಿ ರವಾನೆಯಾಗಲಿದೆ.

ಪರೀಕ್ಷೆ ಬರೆಯಲು ಸಮವಸ್ತ್ರ ಕಡ್ಡಾಯ
ಮಾರ್ಚ್ 28 ರಿಂದ ಏಪ್ರಿಲ್ 11ರ ವರೆಗೆ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಬರುವುದು ಕಡ್ಡಾಯವಾಗಿದೆ. ಒಂದು ವೇಳೆ ವಸ್ತ್ರ ಸಂಹಿತೆಯನ್ನು ಪಾಲಿಸದಿದ್ದರೆ ಪರೀಕ್ಷೆಗೆ ಪ್ರವೇಶ ನೀಡಲಾಗುವುದಿಲ್ಲ ೆಂದು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆ ದಿನಾಂಕದಂದು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸತಕ್ಕದ್ದು ಹಾಗೂ ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸತಕ್ಕದ್ದು ಎಂದು ಆದೇಶಿಸಲಾಗಿದೆ. ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯ ತೀರ್ಪಿನಲ್ಲಿಯೂ ಸರ್ಕಾರದ ಆದೇಶಗಳನ್ನು ಸಿಂಧುಗೊಳಿಸಿರುತ್ತದೆ ಎಂದು ಸುತ್ತೋಲೆ ಹೇಳಿದೆ.
ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರ ಹಾಗೂ ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಧರಿಸಿ, ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರದೊಂದಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಓದಿರಿ :-   ತನಿಖೆ ನಂತರ ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್‌ ರಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ
ಪ್ರಸಕ್ತ ಸಾಲಿನಲ್ಲಿ ಮಾರ್ಚ್‌ 28 ರಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ತೆರಳಲು, ಪರೀಕ್ಷೆ ಬರೆದು ಮನೆಗೆ ವಾಪಸ್‌ ಬರಲು ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ( KSRTC Bus ) ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಸಾರಿಗೆ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ