ಅಮರನಾಥ ಯಾತ್ರೆ ಜೂನ್ 30 ರಂದು ಆರಂಭ, 43 ದಿನಗಳ ನಂತರ ಮುಕ್ತಾಯ

ಶ್ರೀನಗರ: ವಾರ್ಷಿಕ ಅಮರನಾಥ ಯಾತ್ರೆಗೆ ದಿನಾಂಕ ನಿಗದಿಯಾಗಿದೆ. ಈ ವರ್ಷ ಜೂನ್ 30 ರಿಂದ 43 ದಿನಗಳ ಕಾಲ ಅಮರನಾಥ ಯಾತ್ರೆಗೆ ದಿನಾಂಕ ನಿಗದಿ ಮಾಡಲಾಗಿದೆ. ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ ಅಧಿಕೃತವಾಗಿ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ.
ಅಮರನಾಥ ತೀರ್ಥಕ್ಷೇತ್ರ ಮಂಡಳಿಯ ಸಭೆ ನಡೆಸಿದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು, ಈ ವೇಳೆ ಯಾತ್ರೆಗೆ ದಿನಾಂಕ ನಿಗದಿ ಮಾಡಿದ್ದಾರೆ.

2019ರಲ್ಲಿ ವಾರ್ಷಿಕ ಅಮರನಾಥ ಯಾತ್ರೆಯನ್ನು ಮಧ್ಯದಲ್ಲೇ ಮೊಟಕುಗೊಳಿಸಲಾತ್ತು. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡ ಹಿನ್ನೆಲೆಯಲ್ಲಿ ಯಾತ್ರೆ ರದ್ದಾಗಿತ್ತು. ಕೊರೊನಾ ಸೋಂಕು ದೇಶದಲ್ಲಿ ತೀವ್ರವಾಗಿದ್ದ ಕಾರಣ,2020 ಹಾಗೂ 2021ರಲ್ಲಿ ಅಮರನಾಥ ಯಾತ್ರೆಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಸರ್ಕಾರ ಅವಕಾಶ ನೀಡಿರಲಿಲ್ಲ. ಕೇವಲ ಸಾಂಕೇತಿಕವಾಗಿ ಅಮರನಾಥ ಯಾತ್ರೆ ನಡೆದಿತ್ತು.
ಈಗ ಕೊರೊನಾ ಆತಂಕಗಳು ದೂರವಾಗಿವೆ. ಈ ಹಿನ್ನೆಲೆಯಲ್ಲಿ ಭಾನುವಾರ ಅಮರನಾಥ ತೀರ್ಥಕ್ಷೇತ್ರ ಮಂಡಳಿಯ ಸದಸ್ಯರ ಜೊತೆಗೆ ಸಭೆ ನಡೆಸಿದ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರು, ಈ ಬಾರಿ 43 ದಿನಗಳ ಸುದೀರ್ಘ ಅಮರನಾಥ ಯಾತ್ರೆ ಕೈಗೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ. ಜೂನ್ 30ರಿಂದ ಯಾತ್ರೆ ಆರಂಭವಾಗಲಿದ್ದು, ಎಲ್ಲಾ ಕೋವಿಡ್ ಮಾರ್ಗಸೂಚಿಯನ್ನೂ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ | ಷೇರು ಮಾರುಕಟ್ಟೆಯಲ್ಲಿ ಭಾರತದ ರಕ್ಷಣಾ ಕಂಪನಿಗಳಿಗೆ ಹೆಚ್ಚಿದ ಬೇಡಿಕೆ, ಚೀನಾ-ಟರ್ಕಿ ಕಂಪನಿಗಳ ಬೇಡಿಕೆ ಕುಸಿತ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement