ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಕ್ಕೆ ಅವಕಾಶವಿಲ್ಲ

ಬಾಗಲಕೋಟೆ: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ (ಮಾರ್ಚ್‌ 28) ಆರಂಭವಾಗಲಿದೆ. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದ್ದು, ಯಾವುದೇ ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಧರಿಸಿ ಬರಲು ಅವಕಾಶವಿಲ್ಲ‘ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ 8.74 ಲಕ್ಷ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. 3444 ಕೇಂದ್ರಗಳಲ್ಲಿ 48 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಸಲು ಸಿದ್ಧತೆ ಪೂರ್ಣಗೊಂಡಿದೆ. ಪ್ರತಿ ಬಾರಿಯಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 144 ಸೆಕ್ಷನ್ ಜಾರಿ ಇರಲಿದೆ ಎಂದು ತಿಳಿಸಿದರು.

ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಈಗಾಗಲೇ ಆಯಾ ಶಾಲೆಗಳ ಮುಖ್ಯಸ್ಥರು ಪಾಲಿಸುತ್ತಿದ್ದಾರೆ. ಶಾಲೆಯ ಕಾಂಪೌಂಡ್ ಒಳಗೆ ಹಿಜಾಬ್ ಧರಿಸಿಬರಬಹುದು. ಆದರೆ ಕೊಠಡಿಯೊಳಗೆ ಧರಿಸಲು ಅವಕಾಶವಿಲ್ಲ. ಯಾವುದೇ ಉದ್ದೇಶದಿಂದ ಪರೀಕ್ಷೆಗೆ ಗೈರು ಹಾಜರಾದವರಿಗೆ ಮರುಪರೀಕ್ಷೆ ಮಾಡುವುದಿಲ್ಲ. ಬದಲಿಗೆ ಅವರು ಪೂರಕ ಪರೀಕ್ಷೆ ಬರೆಯಬಹುದು‘ ಎಂದು ಹೇಳಿದರು.
ಪಠ್ಯಕ್ರಮದ ವ್ಯಾಪ್ತಿಯಲ್ಲಿ ಪ್ರಶ್ನೆಗಳು ಇರಲಿವೆ. ಹೀಗಾಗಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಆತಂಕ ಬೇಡ. ಈ ಬಾರಿ ಪ್ರಶ್ನೆ ಪತ್ರಿಕೆಯಲ್ಲಿ ಪ್ರಶ್ನೆಗಳ ಆಯ್ಕೆಗೆ (ಚಾಯ್ಸ್) ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಪರ್ಯಾಯ ಪ್ರಶ್ನೆಗಳನ್ನು ತೆಗೆದುಕೊಳ್ಳಬಹುದು ಎಂದರು.
ಪರೀಕ್ಷಾ ಕೇಂದ್ರದಲ್ಲಿ ಪುನರಾವರ್ತಿತ ಹಾಗೂ ಬಾಹ್ಯ ವಿದ್ಯಾರ್ಥಿಗಳಿಗೆ ಸಮವಸ್ತ್ರದಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಮುಖ ಸುದ್ದಿ :-   ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement