ಎರಡನೇ ಅವಧಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ ಸಾವಂತ್ ಪ್ರಮಾಣ ವಚನ ಸ್ವೀಕಾರ

ಪಣಜಿ: ಎರಡನೇ ಅವಧಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ಇಲ್ಲಿನ ಶ್ಯಾಮ್‌ಪ್ರಸಾದ್ ಮುಖರ್ಜಿ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರು ಪ್ರಮೋದ ಸಾವಂತ್‌ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.‍ಪಿ.ನಡ್ಡಾ ಹಾಗೂ ಇತರ ಬಿಜೆಪಿ ನಾಯಕರು ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾದರು. ಸ್ಥಳದಲ್ಲಿ 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

40 ಸದಸ್ಯ ಬಲದ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನ ಗಳಿಸಿತ್ತು. ಮೂವರು ಸ್ವತಂತ್ರ ಅಭ್ಯರ್ಥಿಗಳು ಮತ್ತು ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷದ ಇಬ್ಬರು ಶಾಸಕರ ಬೆಂಬಲವನ್ನೂ ಬಿಜೆಪಿ ಹೊಂದಿದೆ.

ಪ್ರಮುಖ ಸುದ್ದಿ :-   ನೀವು ಅಮಾಯಕರಲ್ಲ : ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ಸುಪ್ರೀಂ ಕೋರ್ಟ್‌ ಮತ್ತೆ ತರಾಟೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement