ಕೊಡಗಿನಲ್ಲಿ ಹುಲಿ ದಾಳಿಗೆ ವ್ಯಕ್ತಿ ಸಾವು

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಸೋಮವಾರ ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದ ತೋಟದಲ್ಲಿ  ಸಮೀಪದ ಕಾಫಿತೋಟದಲ್ಲಿ ಈ ಘಟನೆ ನಡೆದಿದೆ.

ಹುಲಿ ದಾಳಿಗೆ ಮೃತ ಪಟ್ಟ ವ್ಯಕ್ತಿಯನ್ನು ಗಣೇಶ (29) ಗುರುತಿಸಲಾಗಿದೆ. ಕಾಫಿತೋಟದಲ್ಲಿ ಯುವಕನು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಹುಲಿಯೊಂದು ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ವ್ಯಕ್ತಿಯು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯಷ್ಟೇ 3 ಜನರನ್ನು ಕೊಂದು ಹಾಕಿದ್ದ ಹುಲಿ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ಮೂಲಕ ಹುಲಿಯೊಂದನ್ನು ಕೊಲ್ಲಲಾಗಿತ್ತು. ಇದೀಗ ಮತ್ತೊಂದು ಹುಲಿ ವ್ಯಕ್ತಿಯನ್ನು ಸಾಯಿಸಿದ್ದು, ದಕ್ಷಿಣ ಕೊಡಗಿನ ಜನರು ಆತಂಕಗೊಂಡಿದ್ದಾರೆ. ಅರಣ್ಯ ಅಧಿಕಾರಿಗಳು ಹುಲಿಯನ್ನು ಹಿಡಿಯಬೇಕು, ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಕೃಷ್ಣ ಜನ್ಮಭೂಮಿ ಪ್ರಕರಣ: ಮಸೀದಿ ತೆರವು ಕೋರಿದ್ದ ಅರ್ಜಿ ವಿಚಾರಣೆ ಯೋಗ್ಯ ಎಂದ ಮಥುರಾ ಜಿಲ್ಲಾ ನ್ಯಾಯಾಲಯ
advertisement

ನಿಮ್ಮ ಕಾಮೆಂಟ್ ಬರೆಯಿರಿ