ಪರೀಕ್ಷೆ ಬರೆಯುತ್ತಿದ್ದ ವೇಳೆಯೇ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಮೈಸೂರು: ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾದ ಅನುಶ್ರೀ‌‌ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ‌‌ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದರು. ವಿದ್ಯಾರ್ಥಿನಿಯನ್ನು ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

 

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

ನಿಮ್ಮ ಕಾಮೆಂಟ್ ಬರೆಯಿರಿ

advertisement