ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 5 ಕರ್ನಾಟಕ ಪ್ರವಾಸ ರದ್ದು..?

posted in: ರಾಜ್ಯ | 0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೇಲ್‌ ಪ್ರಧಾನಿ ನಫ್ತಾಲಿ ಬೆನೆಟ್‌ರಾಜ್ಯ ಪ್ರವಾಸ ರದ್ದುಗೊಳಿಸಲಾಗಿದೆ ಎಂದು ಹೇಳಲಾಘಿದೆ.
ಏಪ್ರಿಲ್ 5ರಂದು ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಬೇಕಿತ್ತು. ಆದರೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರ ಭಾರತದ ಪ್ರವಾಸ ರದ್ದುಗೊಂಡಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದುಗೊಂಡಿದೆ ಎಂದು ಹೇಳಲಾಗಿದೆ.

ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕೊರೊನಾ ತಗುಲಿರುವ ಬಗ್ಗೆ ಇಸ್ರೇಲ್ ಪ್ರಧಾನಿ ಕಚೇರಿಯಿಂದ ಸೋಮವಾರ ಮಾಹಿತಿ ಹೊರಬಿದ್ದಿದೆ. ಸದ್ಯ ಪ್ರಧಾನಿ ಬೆನೆಟ್ ಆರೋಗ್ಯವಾಗಿದ್ದಾರೆ ಮತ್ತು ಮನೆಯಲ್ಲಿ ಸೆಲ್ಫ್ ಐಸೋಲೇಟ್ ಆಗಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ನಫ್ತಾಲಿ ಬೆನೆಟ್‌ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರಬೇಕಿತ್ತು. ಏಪ್ರಿಲ್ 5ರಂದು 3 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಏಪ್ರಿಲ್ 5ರಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಮೇಲ್ದರ್ಜೆಗೇರಿಸಿದ 150 ಐಟಿಐ ಉದ್ಘಾಟನೆ ಕಾರ್ಯಕ್ರಮ, ಬೆಂಗಳೂರು ಸಬ್‌ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಸೇರಿ ಮೂರು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿತ್ತು, ಆದರೆ ಅದು ರದ್ದಾಗಿದೆ ಎಂದು ಹೇಳಲಾಗಿದೆ.

ಓದಿರಿ :-   ಪರಿಷತ್ ಚುನಾವಣೆ‌ : ಮೂರೂ ಪಕ್ಷಗಳಿಂದ ನಾಳೆ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ, ಅಚ್ಚರಿ ಅಭ್ಯರ್ಥಿಯೋ? ಹೈಕಮಾಂಡ್‌ಗೆ ಕಳುಹಿಸಿದ ಪಟ್ಟಿಗೆ ಮಾನ್ಯತೆಯೋ..?

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ