ರಾಜ್ಯಗಳೂ ಅಲ್ಪಸಂಖ್ಯಾತ ಸಮುದಾಯ ಘೋಷಿಸಬಹುದು, ಕಡಿಮೆ ಸಂಖ್ಯೆ ಇದ್ದರೆ ಹಿಂದೂಗಳೂ ಅಲ್ಪಸಂಖ್ಯಾತರು: ಸುಪ್ರೀಂಗೆ ಕೇಂದ್ರ ಸರ್ಕಾರ

ನವದೆಹಲಿ: ರಾಜ್ಯಗಳಲ್ಲಿ ಹಿಂದೂಗಳು ಅಥವಾ ಇತರ ಧರ್ಮದವರು ಕಡಿಮೆ ಸಂಖ್ಯೆಯಲ್ಲಿ ಇದ್ದರೆ, ರಾಜ್ಯಗಳು ಅಂತಹವರನ್ನು ತಮ್ಮ ಪ್ರಾದೇಶಿಕ ವ್ಯಾಪ್ತಿಯೊಳಗೆ ಅಲ್ಪಸಂಖ್ಯಾತರು ಎಂದು ಘೋಷಿಸಬಹುದು. ಈ ಮೂಲಕ, ಆ ಸಮುದಾಯಗಳು ತಮ್ಮದೇ ಆದ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಲು ಮತ್ತು ನಿರ್ವಹಣೆ ಮಾಡಲು ಅನುವು ಮಾಡಿ ಕೊಡಬಹುದು’ ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ರಾಷ್ಟ್ರೀಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಕಾಯ್ದೆ, 2004 ರ ಸೆಕ್ಷನ್ 2 (ಎಫ್) ನ ಸಿಂಧುತ್ವವನ್ನು ಪ್ರಶ್ನಿಸಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಸಲ್ಲಿಕೆ ಮಾಡಿದೆ.
ಉಪಾಧ್ಯಾಯ ಅವರು ತಮ್ಮ ಮನವಿಯಲ್ಲಿ, ಸೆಕ್ಷನ್ 2 (ಎಫ್) ನ ಸಿಂಧುತ್ವವನ್ನು ಪ್ರಶ್ನಿಸಿದ್ದರು,
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ತನ್ನ ಪ್ರತಿಕ್ರಿಯೆಯಲ್ಲಿ, “ರಾಜ್ಯ ಸರ್ಕಾರಗಳು ಧಾರ್ಮಿಕ ಅಥವಾ ಭಾಷಾ ಸಮುದಾಯವನ್ನು ರಾಜ್ಯದೊಳಗೆ ಅಲ್ಪಸಂಖ್ಯಾತ ಸಮುದಾಯವೆಂದು ಘೋಷಿಸಬಹುದು ಎಂದು ಹೇಳಿದೆ.
ಉದಾಹರಣೆಗೆ, ಮಹಾರಾಷ್ಟ್ರ ಸರ್ಕಾರವು ‘ಯಹೂದಿಗಳನ್ನು’ ರಾಜ್ಯದೊಳಗೆ ಅಲ್ಪಸಂಖ್ಯಾತ ಸಮುದಾಯವೆಂದು ಸೂಚಿಸಿದೆ. ಇದಲ್ಲದೆ, ಕರ್ನಾಟಕ ಸರ್ಕಾರವು ಉರ್ದು, ತೆಲುಗು, ತಮಿಳು, ಮಲಯಾಳಂ, ಮರಾಠಿ, ತುಳು, ಲಮಾಣಿ, ಹಿಂದಿ, ಕೊಂಕಣಿ ಮತ್ತು ಗುಜರಾತಿ ಭಾಷೆಗಳನ್ನು ಕರ್ನಾಟಕ ರಾಜ್ಯದೊಳಗೆ ಅಲ್ಪಸಂಖ್ಯಾತರ ಭಾಷೆ ಎಂದು ಅಧಿಸೂಚನೆ ಹೊರಡಿಸಿದೆ.

ಓದಿರಿ :-   ನಾಯಿಗೆ ವಾಕಿಂಗ್‌ ಮಾಡಿಸಲು ದೆಹಲಿ ಸ್ಟೇಡಿಯಂ ಖಾಲಿ ಮಾಡಿಸಿದ ಐಎಎಸ್ ಅಧಿಕಾರಿ ಲಡಾಖ್‌ಗೆ, ಪತ್ನಿ ಅರುಣಾಚಲಕ್ಕೆ ವರ್ಗಾವಣೆ..!

ಲಡಾಖ್‌, ಮಿಜೋರಾಂ, ಲಕ್ಷದ್ವೀಪ, ಕಾಶ್ಮೀರ, ಮೇಘಾಲಯ, ನಾಗಾಲ್ಯಾಂಡ್‌, ಅರುಣಾಚಲ ಪ್ರದೇಶ, ಪಂಜಾಬ್ ಮತ್ತು ಮಣಿಪುರದಲ್ಲಿ ಯಹೂದಿ, ಬಹಾಯಿ ಮತ್ತು ಹಿಂದೂ ಧರ್ಮಗಳನ್ನು ಅನುಸರಿಸುವವರ ಸಂಖ್ಯೆ ತೀರಾ ಕಡಿಮೆ ಇದೆ. ಈ ಧರ್ಮದವರು, ಈ ರಾಜ್ಯ
ಗಳಲ್ಲಿ ತಮ್ಮದೇ ಆದ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಲು ಸಾಧ್ಯವಿಲ್ಲ’ ಎಂದು ಅಶ್ವಿನಿ ತಮ್ಮ ಅರ್ಜಿಯಲ್ಲಿ ಹೇಳಿದ್ದರು.
‘ಅರ್ಜಿದಾರರು ಹೇಳಿರುವುದು ತಪ್ಪು. ಈ ಸಮುದಾಯಗಳು ಆಯಾ ರಾಜ್ಯದಲ್ಲಿ ತಮ್ಮದೇ ಆದ ಶೈಕ್ಷಣಿಕ ಸಂಸ್ಥೆಗಳನ್ನು ಆರಂಭಿಸಿ, ನಿರ್ವಹಣೆ ಮಾಡಬಹುದು. ರಾಜ್ಯಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸಲು, ಆಯಾ ರಾಜ್ಯ ಸರ್ಕಾರಗಳು ಅಗತ್ಯ ಮಾರ್ಗಸೂಚಿಗಳನ್ನು ರಚಿಸಬಹುದು’ ಎಂದು ಕೇಂದ್ರ ಸರ್ಕಾರವು ಹೇಳಿದೆ.
ಅಲ್ಲದೆ, ಸದರಿ ಕಾಯ್ದೆಯ ಸೆಕ್ಷನ್ 2(ಎಫ್) ಕೇಂದ್ರಕ್ಕೆ ಅನಿಯಂತ್ರಿತ ಅಧಿಕಾರವನ್ನು ನೀಡುತ್ತದೆ ಎಂಬುದನ್ನು ಸಚಿವಾಲಯ ನಿರಾಕರಿಸಿದೆ.

ವಕೀಲ ಅಶ್ವನಿ ಕುಮಾರ್ ದುಬೆ ಮೂಲಕ ಸಲ್ಲಿಸಿದ ಮನವಿಯಲ್ಲಿ, “ನೈಜ” ಅಲ್ಪಸಂಖ್ಯಾತರಿಗೆ ಪ್ರಯೋಜನಗಳನ್ನು ನಿರಾಕರಿಸುವುದು ಮತ್ತು ಸಂಪೂರ್ಣ ಬಹುಮತಕ್ಕೆ ಉದ್ದೇಶಿಸಿರುವ ಯೋಜನೆಗಳ ಅಡಿಯಲ್ಲಿ “ನಿರಂಕುಶ ಮತ್ತು ಅವಿವೇಕದ” ವಿತರಣೆಗಳು ಅವರ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದರು.
ಐದು ಸಮುದಾಯಗಳಾದ ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಪಾರ್ಸಿಗಳನ್ನು ಅಲ್ಪಸಂಖ್ಯಾತರು ಎಂದು ಘೋಷಿಸುವ ಕೇಂದ್ರದ ಅಧಿಸೂಚನೆಯ ವಿರುದ್ಧ ಹಲವಾರು ಹೈಕೋರ್ಟ್‌ಗಳಿಂದ ಪ್ರಕರಣಗಳನ್ನು ತನಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಈ ಹಿಂದೆ ಅಂಗೀಕರಿಸಿದೆ.

ಓದಿರಿ :-   ವೀಸಾ ಲಂಚ ಪ್ರಕರಣ: ಕಾರ್ತಿ ಚಿದಂಬರಂ ಅವರನ್ನು ಸುಮಾರು ಒಂಬತ್ತು ಗಂಟೆಗಳ ಕಾಲ ಪ್ರಶ್ನಿಸಿದ ಸಿಬಿಐ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

advertisement

ನಿಮ್ಮ ಕಾಮೆಂಟ್ ಬರೆಯಿರಿ