ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಬಳಿ ಹೆಜ್ಜೇನು ದಾಳಿ ; ವಿದ್ಯಾರ್ಥಿಗಳು-ಪೋಷಕರಿಗೆ ಕಚ್ಚಿದ ಜೇನು ನೊಣ

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು, ಪಾಲಕರು, ಪರೀಕ್ಷಾ ಮೇಲ್ವಿಚಾರಕರ ಮೇಲೆ ಹಜ್ಜೇಣು ದಾಳಿ ನಡೆಸಿದ ಘಟನೆ ಶಿವಮೊಗ್ಗ ನಗರದ ಬಿ.ಎಚ್.ರಸ್ತೆಯ ಮೇರಿ ಇಮ್ಯಾಕುಲೇಟ್ ಶಾಲೆಯಲ್ಲಿ ನಡೆದಿದೆ.

ಆರು ವಿದ್ಯಾರ್ಥಿಗಳು ಹಾಗೂ 12 ಪೋಷಕರ ಮೇಲೆ ಜೇನು ಹುಳಗಳು ದಾಳಿ ನಡೆಸಿವೆ. ಸ್ಥಳಕ್ಕೆ ಬಂದ ವೈದ್ಯರ ತಂಡ, ಹೆಜ್ಜೇನಿಂದ ಕಡಿತಕ್ಕೊಳಗಾದ ಮಕ್ಕಳು ಮತ್ತು ಪರೀಕ್ಷಾ ಮೇಲ್ವಿಚಾರಕರಿಗೆ ಚಿಕಿತ್ಸೆ ನೀಡಿದರು. ನಂತರ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಸೋಮವಾರ ಬೆಳಗ್ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಕ್ಕೂ ಮುನ್ನ ಈ ಘಟನೆ ನಡೆದಿದೆ.
ಸಮಯ ತಡವಾದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಸಮಯ ನೀಡಲು ಡಿಡಿಪಿಐ ಸೂಚನೆ ನೀಡಿದ್ದಾರೆ.‌ ಜೇನುದಾಳಿಯಾದ ಶಾಲೆಯ ಬಳಿಯೇ ವೈದ್ಯಕೀಯ ಸಿಬ್ಬಂದಿ ನೇಮಿಸಲಾಗಿದೆ. ಈ ಶಾಲೆಯ ಬಳಿ ಜೇನು ಗೂಡು ಕಟ್ಟಿಕೊಂಡಿದ್ದು, ಅದನ್ನು ತೆಗೆಯಲು ಸೂಚಿಸಿರುವುದಾಗಿ ಡಿಡಿಪಿಐ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement