ಜಿಪಂ, ತಾಪಂ ಚುನಾವಣಾ ಮೀಸಲಾತಿ: ಮಾ.31ರಂದು ಸರ್ವ ಪಕ್ಷಗಳ ಸಭೆ

ಬೆಂಗಳೂರು: ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ರಾಜಕೀಯ ಮೀಸಲಾತಿ ನಿರಾಕರಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಬಗ್ಗೆ ಮಾರ್ಚ್‌ 31 ರಂದು ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿಧಾನಸಭೆಗೆ ಸೋಮವಾರ ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಇಲಾಖೆಯ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಜಿಪಂ ಹಾಗೂ ತಾಪಂ ಚುನಾವಣೆ ಹೇಗೆ ನಡೆಯಬೇಕು ಎಂಬ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ನಿಟ್ಟಿನಲ್ಲಿ ಏನೇನು ಮಾಡಬೇಕು ಎಂದು ೪ ಬಾರಿ ಕಾನೂನು ಸಚಿವರು ಮತ್ತು ಸಚಿವ ಸಂಪುಟದಲ್ಲೂ ಚರ್ಚೆ ನಡೆಸಲಾಗಿತ್ತು. ಸವಿರೋಧ ಪಕ್ಷದ ನಾಯಕರು ಈ ತಿಂಗಳ 31ರಂದು ಸರ್ವಪಕ್ಷ ಸಭೆ ಕರೆಯುವಂತೆ ಮನವಿ ಮಾಡಿದ್ದಾರೆ. ಅದರಂತೆ 31ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚರ್ಚೆ ಮಾಡಿ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗದಂತೆ ಪರಿಹಾರ ಹುಡುಕಬೇಕಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಚರ್ಚೆ ಮಾಡಿ ಚುನಾವಣೆಯ ಬಗ್ಗೆ ತೀರ್ಮಾನ ಮಾಡೋಣ ಎಂದರು.
ಇದಕ್ಕೂ ಮೊದಲು ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸುಪ್ರೀಂ ಕೋರ್ಟ್ ತೀರ್ಪಿನಿಂದ ಹಿಂದುಳಿದ ವರ್ಗಕ್ಕೆ ಮೀಸಲಾತಿ ಸಿಗದಿದ್ದರೆ ಅನ್ಯಾಯವಾಗುತ್ತದೆ. ಹಾಗಾಗಿ ಸರ್ಕಾರ ಈ ಬಗ್ಗೆ ಏನು ಮಾಡಿದೆ. ಅದನ್ನು ಹೇಳಬೇಕು. ಈ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಸಮಿತಿ ಮಾಡಿದ್ದೀರಿ, ಆ ಸಮಿತಿ ಇನ್ನು ವರದಿ ನೀಡಿಲ್ಲ ಎಂದು ಹೇಳಿದರು.

ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement