ಸಿಇಟಿ ಪ್ರವೇಶ ಪರೀಕ್ಷೆಗೆ ದಿನಾಂಕ ಪ್ರಕಟ: ಏಪ್ರಿಲ್ 22ರ ವರೆಗೆ ಶುಲ್ಕ ಪಾವತಿಗೆ ಅವಕಾಶ

ಬೆಂಗಳೂರು: ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ದಿನಾಂಕ ನಿಗದಿಯಾಗಿದೆ.
ಜೂನ್ 16, 17, 18ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ಉನ್ನತ ಶೀಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಪರೀಕ್ಷೆಗಳು ನಡೆಯಲಿವೆ, 17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ 18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 5ರಿಂದ 20ರ ವರೆಗೆ ಸಿಇಟಿಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಏಪ್ರಿಲ್ 22ರ ವರೆಗೆ ಶುಲ್ಕ ಪಾವತಿಗೆ ಅವಕಾಶ ಇರುತ್ತದೆ. ಮಾಹಿತಿ ಪರಿಷ್ಕರಣೆಗೆ ಮೇ 2ರಿಂದ 6ರ ವರೆಗೆ ಅನುಮತಿ ನೀಡಲಾಗಿದೆ. ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್​.ಅಶ್ವತ್ಥ್​​ ನಾರಾಯಣ ತಿಳಿಸಿದ್ದಾರೆ.

ನೀಟ್ ಪರೀಕ್ಷೆ (NEET) ವಿಳಂಬವಾದ ಕಾರಣ ಸಿಇಟಿಗೆ ಅರ್ಜಿ ಅಹ್ವಾನವು ತಡವಾಗಿದೆ ಎಂದು ಸಚಿವ ಅಶ್ವತ್ಥನಾರಾಯಣ ಇತ್ತೀಚೆಗೆ ಹೇಳಿದ್ದರು. ಸಾಮಾನ್ಯವಾಗಿ ಜನವರಿಯಲ್ಲಿ ಸಿಇಟಿಗೆ ಅರ್ಜಿ ಆಹ್ವಾನಿಸಲಾಗುತ್ತಿತ್ತು ಎಂದು ತಿಳಿಸಿದ್ದರು.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement