ನವದೆಹಲಿ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಝೆವಾರ್ ಪ್ರದೇಶದಲ್ಲಿ ವಿಕಲಚೇತನ ವ್ಯಕ್ತಿಯನ್ನು ಪುರುಷ ಮತ್ತು ಮಹಿಳೆ ಅಮಾನುಷವಾಗಿ ಥಳಿಸಿದ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮಾರ್ಚ್ 27 ರಂದು ಈ ಘಟನೆ ನಡೆದಿದ್ದು, ದುಷ್ಕರ್ಮಿಗಳಾದ ಜುಗೇಂದ್ರ ಮತ್ತು ಅವರ ಪತ್ನಿ ತಮ್ಮ ಸಂಬಂಧಿಯಾಗಿರುವ ಅಂಗವಿಕಲ ವ್ಯಕ್ತಿ ಗಜೇಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಆರೋಪಿ ಜುಗೇಂದ್ರ ತನ್ನ ಶಾಲೆಯನ್ನು ಗಜೇಂದ್ರನಿಗೆ ನಡೆಸಲು ನೀಡಿದ್ದನೆಂದು ತಿಳಿದುಬಂದಿದೆ. ಆದರೆ ಸಾಂಕ್ರಾಮಿಕ ರೋಗವು ದೇಶವನ್ನು ಬಾಧಿಸಿದ್ದರಿಂದ ಲಾಭದಲ್ಲಿ ನಡೆಸಲು ವಿಫಲನಾಗಿದ್ದಾನೆ. ಇದರಿಂದ ಇಬ್ಬರ ನಡುವೆ ವಾಗ್ವಾದ ನಡೆದು ಈ ಘಟನೆ ನಡೆದಿದೆ. ಜುಗೇಂದ್ರ ಹಾಗೂ ಪತ್ನಿ ಮನಬಂದಂತೆ ಗಜೇಂದ್ರನಿಗೆ ಥಳಿಸಿದ್ದು, ಸ್ಕೂಟರ್ ಹಾಳು ಮಾಡಿದ್ದಾರೆ.
ಈ ವೀಡಿಯೋವನ್ನು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಬಿವಿ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸಂತ್ರಸ್ತ ಗಜೇಂದ್ರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಹೆಚ್ಚುವರಿ ಡಿಸಿಪಿ ವಿಶಾಲ್ ಪಾಂಡೆ ತಿಳಿಸಿದ್ದಾರೆ. ಆರೋಪಿ ಪತಿ-ಪತ್ನಿ ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ