ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬ್ರಿಟನ್ ಸಂಸತ್ತಿಗೆ ಆಹ್ವಾನ

ಮುಂಬೈ : 1990 ರಲ್ಲಿ ಕಾಶ್ಮೀರ್ ಪಂಡಿತರು ಅಲ್ಲಿನ ಮುಸ್ಲಿಂ ಭಯೋತ್ಪಾದಕರಿಂದ ಅನುಭವಿಸಿದ ನರಕವನ್ನು ಎಳೆ ಎಳೆಯಾಗಿ ತೋರಿಸಿದ ಹಿಂದಿಯ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನಿರ್ದೇಶಕ ವಿವೇಕ ಅಗ್ನಿಹೋತ್ರಿಗೆ ಈಗ ಬ್ರಿಟನ್ ಸಂಸತ್ತಿನಿಂದ ಅವರಿಗೆ ವಿಶೇಷ ಆಹ್ವಾನ ಬಂದಿದೆಯಂತೆ. ತನಗೆ ತನ್ನ ಪತ್ನಿ ಪಲ್ಲವಿಗೆ ಬ್ರಿಟನ್ ಸಂಸತ್​ನವರು ಆಹ್ವಾನಿಸಿದ್ದಾರೆ ಎಂದು ಈ ಬಗ್ಗೆ ಸ್ವತಃ ವಿವೇಕ್ ಅಗ್ನಿಹೋತ್ರಿ ತಿಳಿಸಿದ್ದಾರೆ.

ಈ ಚಿತ್ರದ ಮೂಲಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಹೆಸರು ಇಡೀ ದೇಶಕ್ಕೆ ಚಿರಪರಿಚಿತವಾಗಿದೆ.18 ದಿನಗಳಲ್ಲಿ 231 ಕೋಟಿ ಗಳಿಸಿದ ಈ ಸಿನಿಮಾದಿಂದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಇಡೀ ದೇಶದಲ್ಲಿ ಬಹುತೇಕ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ . ವಿವೇಕ್ ಅಗ್ನಿಹೋತ್ರಿ ಅವರ ಸಿನಿಮಾಗೆ ವಿಶ್ವಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಈಗ ಬ್ರಿಟನ್ ಸಂಸತ್ತಿನಿಂದ ತನಗೆ ವಿಶೇಷ ಆಹ್ವಾನ ಬಂದಿದೆ . ವಿವೇಕ್ ಅಗ್ನಿಹೋತ್ರಿ ಅ ಹೇಳಿದ್ದಾರೆ.

ಪತ್ನಿ ಪಲ್ಲವಿ ಮತ್ತು ನನ್ನನ್ನು ಬ್ರಿಟನ್ ಸಂಸತ್​ನವರು ಆಹ್ವಾನಿಸಿದ್ದಾರೆ. ಮುಂದಿನ ತಿಂಗಳು ನಾವು ಅಲ್ಲಿಗೆ ಹೋಗುತ್ತೇವೆ. ಕಾಶ್ಮೀರಿ ಪಂಡಿತರ ನರಮೇಧದ ಸಂದೇಶವನ್ನು ಪ್ರಪಂಚದ ಮೂಲೆ ಮೂಲೆಗೆ ತಲುಪಿಸುವ ಉದ್ದೇಶದಿಂದ ಕಾಶ್ಮೀರಿ ಫೈಲ್ಸ್ ಸಿನಿಮಾ ಮಾಡಲಾಗಿದೆ . ಬ್ರಿಟನ್ ಸಂಸತ್ತಿಗೆ ಹೋಗುತ್ತಿರುವುದಕ್ಕೆ ನನಗೆ ಖುಷಿಯಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ .
ಅಂದಹಾಗೆ , ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ದಕ್ಷಿಣ ಭಾರತದಲ್ಲಿ ಹಿಂದಿ ಮಾತನಾಡುವವರು ಹಾಗೂ ಅರ್ಥೈಸಿಕೊಳ್ಳುವವರ ಸಂಖ್ಯೆ ಕಡಿಮೆ. ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಸಂಪೂರ್ಣವಾಗಿ ಹಿಂದಿಯಲ್ಲೇ ಇದೆ . ಹೀಗಾಗಿ ಸಿನಿಮಾವನ್ನು ಕನ್ನಡ ಸೇರಿದಂತೆ ದಕ್ಷಿಣದ ಭಾಷೆಗಳಿಗೆ ಡಬ್ ಮಾಡಲು ಚಿಂತನೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಕೋಟಕ್‌ ಮಹೀಂದ್ರಾ ಬ್ಯಾಂಕಿಗೆ ಆರ್‌ಬಿಐ ನಿರ್ಬಂಧ : ಹೊಸ ಗ್ರಾಹಕರ ಆನ್‌ಲೈನ್‌ ಸೇರ್ಪಡೆ, ಹೊಸ ಕ್ರೆಡಿಟ್‌ ಕಾರ್ಡ್‌ ವಿತರಣೆಗೆ ಬ್ರೇಕ್‌

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement