ರಾಜ್ಯದ ಉಪಲೋಕಾಯುಕ್ತರಾಗಿ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯದ 2ನೇ ಉಪಲೋಕಾಯುಕ್ತರಾಗಿ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಇಂದು, ಮಂಗಳವಾರ ಅಧಿಕಾರ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ 2ನೇ ಉಪ ಲೋಕಾಯುಕ್ತರಾಗಿ ರಾಜ್ಯಪಾಲರಾದ ತಾವರ್ ಚಂದ್ ಗೆಲ್ಹೋಟ್ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು.

ಈ ಹುದ್ದೆ ಸುಮಾರು ಎರಡು ವರ್ಷಗಳಿಂದ ಖಾಲಿ ಇತ್ತು. ಉಪ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಆನಂದ ಅವರ ಸೇವಾವಧಿ 2020ರ ಡಿಸೆಂಬರಿನಲ್ಲಿ ಮುಗಿದಿತ್ತು. ಈ ಸ್ಥಾನಕ್ಕೆ ನಿವೃತ್ತ ನ್ಯಾ. ಕೆ.ಎನ್.ಫಣೀಂದ್ರ ಅವರನ್ನು ನೇಮಿಸಲಾಗಿತ್ತು. ರಾಜ್ಯಪಾಲರು ಕಳೆದ ಸೋಮವಾರ ನೇಮಕಾತಿ ಆದೇಶಕ್ಕೆ ಸಹಿ ಹಾಕಿದ್ದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಅವರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ್ಯಾ. ಕೆ ಎನ್ ಫಣೀಂದ್ರ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದರು.
ಮತ್ತೊಂದು ಉಪ ಲೋಕಾಯುಕ್ತ ಹುದ್ದೆಯಲ್ಲಿ ನಿವೃತ್ತ ನ್ಯಾ. ಬಿ.ಎಸ್.ಪಾಟೀಲ್ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು ಎರಡು ತಿಂಗಳಿಂದ ಲೋಕಾಯುಕ್ತ ಹುದ್ದೆ ಖಾಲಿ ಇದೆ. ಈ ಹುದ್ದೆಗೆ ಸರ್ಕಾರ ನೇಮಕ ಮಾಡಬೇಕಿದೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement