ಸಿದ್ಧಗಂಗಾ ಶ್ರೀಗಳ ಕುರಿತ ಸಿನಿ ಸೀರಿಸ್‌ನಲ್ಲಿ ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್..?

ಸಿದ್ದಗಂಗಾ ಶ್ರೀಗಳು ಮಾಡಿದ ಸಾಮಾಜಿಕ ಕೆಲಸಗಳು ಹಾಗೂ ಅವರ ಜೀವನದ ಕುರಿತು ಮಿನಿ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರು ನಟಿಸಬೇಕು ಎಂಬುದು ಚಿತ್ರತಂಡದ ಆಶಯವಾಗಿದ್ದು, ಈ ಕಾರಣಕ್ಕೆ ಅವರ ಕಾಲ್​ಶೀಟ್​ಅನ್ನು ಕೇಳಲಾಗಿದೆ. ಅವರು ಒಪ್ಪಿದರೆ ಅವರು ಪೂರ್ಣಪ್ರಮಾಣದಲ್ಲಿ ಕನ್ನಡದಲ್ಲಿ ನಟಿಸಿದಂತೆ ಆಗಲಿದೆ.

ಅಮಿತಾಭ್ ಬಚ್ಚನ್ ಅವರು ಸಿದ್ದಗಂಗಾ ಶ್ರೀಗಳ ಪಾತ್ರವನ್ನ ಮಾಡಲು ಈಗಾಗಲೇ ಸಂಪರ್ಕ ಮಾಡಲಾಗಿದೆ. ಅವರು ಕಥೆಯನ್ನು ಕೇಳಿದ್ದಾರೆ. ಆದರೆ, ಸದ್ಯ ಅಮಿತಾಭ್ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ಗ್ರೀನ್ ಸಿಗ್ನಲ್​ಗಾಗಿ ಕಾಯುತ್ತಿದ್ದೇವೆ ಎಂದು ಹಂಸಲೇಖ ಹೇಳಿದ್ದಾರೆ.
ಸಿದ್ದಗಂಗಾ ಶ್ರೀಗಳ 115 ಜಯಂತೋತ್ಸವದ ಪ್ರಯುಕ್ತ ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಈ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಡಾ. ಹಂಸಲೇಖ ಅವರ ಸಾರಥ್ಯದಲ್ಲಿ ಒಟ್ಟು 52 ಎಪಿಸೋಡ್​​ಗಳನ್ನು ಒಳಗೊಂಡ ಮಿನಿ ಸಿರೀಸ್​​ಗಳನ್ನಾಗಿ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಇಂಗ್ಲಿಷ್​ ಹಾಗೂ ಸಂಸ್ಕೃತ ಭಾಷೆಗಳಲ್ಲಿ ಈ ಸೀರಿಸ್ ಸಿದ್ಧವಾಗುತ್ತಿದೆ.

ಈ ಸಿನಿ ಸಿರೀಸ್​ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಅಂದಿನ ಕಾರ್ಯಕ್ರಮದಲ್ಲಿ 115 ಜನ ಗಾಯಕರು ಹಂಸಲೇಖ ಅವರ ಸಾರಥ್ಯದಲ್ಲಿ 6 ಹಾಡುಗಳನ್ನ ಹಾಡಲಿದ್ದಾರೆ. ಅಮಿತ್ ಷಾ ಜೊತೆಗೆ ರಾಜ್ಯದ ನಾಯಕರು ಇರಲಿದ್ದಾರೆ.
ಈ ಮಿನಿ ಸಿನಿ ಸೀರಿಸ್​ಗೆ ಬಸವ ಭಾರತ ಎಂದು ಹೆಸರಿಡಲಾಗಿದೆ. ಈ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ‌ ಖಾಸಗಿ ಹೋಟೆಲ್​ನಲ್ಲಿ ಮಾಡಲಾಯಿತು. ಎಂ.ಪಿ ರೇಣುಕಾಚಾರ್ಯ, ನಿರ್ಮಾಪಕ ಎಮ್.ರುದ್ರೇಶ್, ದೀಪಕ್, ಸದಾ ಶಿವಯ್ಯ, ಮಾಜಿ ಐಎಎಸ್ ಅಧಿಕಾರಿ ಡಾ. ಸೋಮಶೇಖರ್ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement