ಇಂದೂ ಪೆಟ್ರೋಲ್‌-ಡೀಸೆಲ್‌ ಬೆಲೆಯಲ್ಲಿ ಹೆಚ್ಚಳ, 9 ದಿನದಲ್ಲಿ 5.60 ರೂ.ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬುಧವಾರ (ಮಾರ್ಚ್ 30)ವೂ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದ್ದು, ಕಳೆದ 9 ದಿನಗಳಲ್ಲಿ ಲೀಟರ್‌ಗೆ 5.60 ರೂ.ಗಳಷ್ಟು ಹೆಚ್ಚಾಗಿದೆ. .
ಮಾರ್ಚ್ 22 ರಂದು ದರ ಪರಿಷ್ಕರಣೆಯಲ್ಲಿ ನಾಲ್ಕೂವರೆ ತಿಂಗಳ ಸುದೀರ್ಘ ವಿರಾಮಕ್ಕೆ ತೈಲ ಕಂಪನಿಗಳು ಅಂತ್ಯ ಹಾಡಿ, ನಿತ್ಯವೂ 70-80 ಪೈಸೆಯಷ್ಟು ಗ್ರಾಹಕರ ಜೇಬಿಗೆ ಕತ್ತರಿ ಹಾಕಲು ಪ್ರಾರಂಭಿಸಿವೆ. ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿದೆ ಮತ್ತು ಸ್ಥಳೀಯ ತೆರಿಗೆ ಆಧರಿಸಿ ರಾಜ್ಯದಿಂದ ರಾಜ್ಯಕ್ಕೆ ಇದು ಬದಲಾಗುತ್ತಾ ಸಾಗುತ್ತದೆ.
ಮೊದಲ ನಾಲ್ಕು ದಿನ ಪ್ರತಿ ದಿನ 80 ಪೈಸೆ ಹೆಚ್ಚಳ ಮಾಡಿದ್ದರೆ, ಈಗ 40- 50 ಪೈಸೆ ಹೆಚ್ಚಳ ಮಾಡಲಾಗುತ್ತಿದೆ. ಮಾರ್ಚ್​ 22 ರಿಂದ ಇಲ್ಲಿವರೆಗೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರಿಗೆ 5.60 ರೂ. ಹೆಚ್ಚಳ ಮಾಡಲಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಈ ಹಿಂದೆ 100.21 ರೂ.ಗಳಿಂದ 101.01 ರೂ.ಗಳಾಗಿದೆ. ಡೀಸೆಲ್ ದರಗಳು ಲೀಟರ್‌ಗೆ 91.47 ರೂ.ಗಳಿಂದ 92.27 ರೂ.ಗಳಿಗೆ ಏರಿಕೆ ಕಂಡಿವೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 115.88 ಮತ್ತು 100.10 ರೂ.ಗಳಾಗಿದ್ದರೆ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 106.69 ರೂ.ಗಳಾದರೆ ಮತ್ತು ಡೀಸೆಲ್ ಬೆಲೆ 96.76 ರೂ.ಗಳಾಗಿದೆ. ಮಾರಾಟ ಮಾಡಲಾಗುತ್ತಿದೆ. ಕೋಲ್ಕತ್ತಾದಲ್ಲಿ ಈಗ ಪೆಟ್ರೋಲ್ ಬೆಲೆ 110.52 ರೂ. ಮತ್ತು ಡೀಸೆಲ್ ಬೆಲೆ 95.42 ರೂ. ಆಗಿದೆ.
ಬೆಂಗಳೂರಿನಲ್ಲಿ ಇಂದು ಲೀಟರ್​​​ಗೆ 30 ಪೈಸೆಗಿಂತ ಅಧಿಕವಾಗಿದೆ. ನಿನ್ನೆ ಲೀಟರ್​ಗೆ 105.62 ರೂ. ಇದ್ದದ್ದು ಇಂದು 105.94 ರೂ. ಏರಿಕೆ ಕಂಡಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯದಿಂದ ಜಾಗತಿಕ ತೈಲ ಬೆಲೆಗಳು ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ನಾಳೆ ಫಿಲಿಪ್ಪೀನ್ಸ್‌ಗೆ ʼಬ್ರಹ್ಮೋಸ್ ಕ್ಷಿಪಣಿʼಗಳ ಮೊದಲ ಸೆಟ್ ನೀಡಲಿದೆ ಭಾರತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement