ಮುಸಲ್ಮಾನ ವರ್ತಕರಿಂದ ಪೇಜಾವರ ಶ್ರೀಗಳ ಭೇಟಿ; ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲು ಮನವಿ

ಉಡುಪಿ: ಉಡುಪಿಯಲ್ಲಿ ಜಾತ್ರೆಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಮಾಡದೆ ಅವಕಾಶ ನೀಡಬೇಕು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಮುಸಲ್ಮಾನ ವರ್ತಕರು ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯಿಂದ ಅಬೂಬಕ್ಕರ್ ಆತ್ರಾಡಿ ನೇತೃತ್ವದಲ್ಲಿ ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಮುಸ್ಲಿಂ ವರ್ತಕರು, ದೇವಸ್ಥಾನಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಬಹಿಷ್ಕಾರ ಹಾಕಿದ್ದರಿಂದ ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಮುಸಲ್ಮಾನ ವರ್ತಕರು, ಮುಸ್ಲಿಂ ಮುಖಂಡರುಗಳು, ಕ್ರೈಸ್ತ ಧರ್ಮಗುರುಗಳು ಪೇಜಾವರ ಶ್ರೀಗಳನ್ನು ಭೇಟಿಯಾಗಿ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದರು. ಭೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿ, ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ. ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ ಎಂದರು.

ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ವ್ಯಾಪಾರದ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಶಾಂತಿ- ಸಾಮರಸ್ಯ, ಸೌಹಾರ್ದ, ನೆಮ್ಮದಿ ಅವಶ್ಯವಾಗಿ ಬೇಕು. ಆದರೆ ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲ. ಹಿಂದೂ ಸಮಾಜ ಬಹಳ ಕಾಲದಿಂದ ನೋವುಂಡಿದೆ. ಹಲವು ಅಹಿತಕರ ಘಟನೆಗಳಿಂದ ಹಿಂದೂ ಸಮಾಜ ಬಹಳ ನೋವಿನಲ್ಲಿದೆ. ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ. ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ. ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ ಎಂದು ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು. ಹಿಂದೂ ಸಮಾಜಕ್ಕೆ ಪದೇಪದೇ ನೋವಾಗುವ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯುತ್ತದೆ. ವಿಧವೆ ಮಹಿಳೆಯ ಕೊಟ್ಟಿಗೆಯಲ್ಲಿದ್ದ ಎಲ್ಲಾ ಹಸುಗಳನ್ನು ಕಳ್ಳತನ ಮಾಡಲಾಗಿದೆ. ಆ ಮಹಿಳೆ ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಅನೇಕ ಘಟನೆಗಳು ಸಮಾಜದಲ್ಲಿ ಅನೇಕ ಬಾರಿ ನಡೆದು ಸಮಾಜದಲ್ಲಿ ನೋವು ಮಡುಗಟ್ಟಿದೆ. ನಾವು ಶಾಂತಿ ಸಹಬಾಳ್ವೆಯಿಂದ ಇರೋಣ ಎಂದು ಬಾಯಲ್ಲಿ ಹೇಳಿದರೆ ಅದು ಸಾಧ್ಯವಿಲ್ಲ. ಅದು ತಳಮಟ್ಟದಲ್ಲಿ ವ್ಯಕ್ತವಾಗಬೇಕು. ಇಂಥ ಕೃತ್ಯಗಳು ನಿಲ್ಲಬೇಕು. ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲಸಲು ಯಾರ ಮಧ್ಯಸ್ಥಿಕೆಯು ಬೇಡ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ತಿಳಿಸಿದ್ದಾರೆ.
ಉಡುಪಿಯಲ್ಲಿ ಹಿಜಾಬ್ ಹೋರಾಟದ ಪರಿಣಾಮ ಈ ಆರ್ಥಿಕ ಬಹಿಷ್ಕಾರ ನಡೆಯುತ್ತಿದೆ. ಯಾರಿಂದ ಅನ್ಯಾಯವಾಗಿದೆ ಅವರೇ ಸಮಸ್ಯೆ ಸರಿ ಮಾಡಿಕೊಳ್ಳಬೇಕು. ತಪ್ಪು ಮಾಡಿದವರನ್ನು ಆ ಸಮಾಜ ಶಿಕ್ಷಿಸಲಿ. ಮಾಡಿದ ಅನ್ಯಾಯಕ್ಕೆ ಆ ಸಮಾಜ ಪ್ರತಿಭಟಿಸಲಿ. ಒಬ್ಬರು ಮಾಡಿದ ಅನ್ಯಾಯ ಇಡೀ ಸಮಾಜಕ್ಕೆ ತಟ್ಟುತ್ತದೆ. ತಪ್ಪಿತಸ್ಥರಿಗೆ ಬೆನ್ನೆಲುಬಾಗಿ ನಿಲ್ಲದಿದ್ದರೆ ಹಿಂದೂ ಸಮಾಜಕ್ಕೆ ನೋವಾಗುವುದಿಲ್ಲ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement