ಇಂದು ಮತ್ತಷ್ಟು ದುಬಾರಿಯಾದ ಪೆಟ್ರೋಲ್- ಡೀಸೆಲ್: 10 ದಿನಗಳಲ್ಲಿ 9ನೇ ಬಾರಿ ಬೆಲೆ ಏರಿಕೆ

ನವದೆಹಲಿ: ಭಾರತದಲ್ಲಿ ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಓಟ ಮುಂದುವರಿದಿದ್ದು, ಇಂದು (ಮಾರ್ಚ್ 30) ಮತ್ತೆ ಏರಿಕೆ ಕಂಡಿದೆ.
ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಲಾ 80 ಪೈಸೆ ಹೆಚ್ಚಿಸಲಾಗಿದೆ. ಕಳೆದ 10 ದಿನಗಳಲ್ಲಿ ಇಂಧನ ಬೆಲೆ ಪ್ರತಿ ಲೀಟರ್​ಗೆ ಸರಾಸರಿ 6.40 ರೂ.ಗಳಷ್ಟು ಹೆಚ್ಚಾಗಿದೆ.
ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಒಂದು ಲೀಟರ್​ಗೆ 101.81 ರೂ.ತಲುಪಿದೆ. ಲೀಟರ್ ಡೀಸೆಲ್ ಬೆಲೆಯೂ 80 ಪೈಸೆ ಏರಿಕೆಯಾಗಿದ್ದು, ಬೆಲೆ 93.07 ರೂ. ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ 116.72, ಡೀಸೆಲ್ 100.94ಕ್ಕೆ ರೂ.ಗಳಿಗೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಪೆಟ್ರೋಲ್‌ ದರ 107.28 ರೂ.ಗಳು ಮತ್ತು ಡೀಸೆಲ್ 91.25 ರೂ.ಗಳಿಗೆ ತಲುಪಿದೆ.

ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 107.45 ರೂ.ಗಳು ಮತ್ತು ಡೀಸೆಲ್ ಬೆಲೆ 97.52 ಗಳಾಗಿವೆ. ಇಂದು 76 ಪೈಸೆ ಹೆಚ್ಚಳವಾಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 111.35 ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ₹ 96.22 ರೂ>ಗಳಿಗೆ ತಲುಪಿದೆ.
ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ.
ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 50 ಮತ್ತು 30 ಪೈಸೆಯಷ್ಟು ಹೆಚ್ಚಿಸಲಾಯಿತು. ನಿನ್ನೆ (ಮಾರ್ಚ್ 30) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ 80 ಮತ್ತು 80 ಪೈಸೆಯಷ್ಟು ಹೆಚ್ಚಿಸಲಾಯಿತು. ಈವರೆಗಿನ ಸರಾಸರಿ ಲೆಕ್ಕಹಾಕಿದರೆ ಕಳೆದ 9 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 6.40 ರೂ.ಗಳಷ್ಟು ಹೆಚ್ಚಾಗಿದೆ.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

ತೈಲ ಕಂಪನಿಗಳು ಪ್ರತಿದಿನ ಬೆಳಿಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. ಕಳೆದ ಮಾರ್ಚ್ 22ರಿಂದ ಪೆಟ್ರೋಲ್ ಡೀಸೆಲ್ ಧಾರಣೆ ಸತತ ಏರಿಕೆ ಕಾಣುತ್ತಿದೆ. ಇಂದು ಮತ್ತೆ ಬೆಲೆಗಳು ಏರಿಕೆ ಕಂಡಿದ್ದು, ಇದು 9ನೇ ದಿನದ ಬೆಲೆ ಏರಿಕೆಯಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement