ಕರ್ನಾಟಕದಲ್ಲಿ 6000 ಕೋಟಿ ರೂ.ಗಳ ಹೂಡಿಕೆಗೆ ಮುಂದಾದ ಎಕ್ಸೈಡ್

ಬೆಂಗಳೂರು: ಲಿಥಿಯಂ-ಐಯಾನ್ ಸೆಲ್ ಉತ್ಪಾದನಾಗಾಗಿ ರಾಜ್ಯದಲ್ಲಿ 6 ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆ ಮಾಡಲು ‌ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ.
ಗುರುವಾರ ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ ನಿರಾಣಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಸುಧಾರಿತ ಕೋಶ ರಸಾಯನಶಾಸ್ತ್ರ ತಂತ್ರಜ್ಞಾನಕ್ಕಾಗಿ ಎಕ್ಸೈಡ್ ಇಂಡಸ್ಟ್ರೀಸ್ನ ಭಾರತದ ಅತಿದೊಡ್ಡ ಗಿಗಾ ಕಾರ್ಖಾನೆಗಳಲ್ಲಿ ಒಂದಾಗಿದೆ. ಬಂಡವಾಳ ಹೂಡಿಕೆ ಮಾಡುತ್ತಿರುವ ಪರಿಣಾಮ ರಾಜ್ಯದಲ್ಲಿ ಒಟ್ಟು 1200 -1400 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಚಕ್ರವರ್ತಿ ಹೇಳಿದರು.
ಎಕ್ಸೈಡ್ ಇಂಡಸ್ಟ್ರೀಸ್ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯವಿಮಾನ ನಿಲ್ದಾಣದ ಬಳಿಯ ಹರಳೂರು ಕೈಗಾರಿಕಾ ಪ್ರದೇಶದಲ್ಲಿ 80 ಎಕರೆ ಭೂಮಿಯನ್ನು ನೀಡುವಂತೆ ಕೋರಿದೆ.

ರಾಜ್ಯ ಸರ್ಕಾರ ಕಂಪನಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಿರಾಣಿ ಅವರು, ಈ‌ ಯೋಜನೆಯು ಶೀಘ್ರ ಕಾರ್ಯಗತಗೊಳ್ಳಲಿ. ಕರ್ನಾಟಕದಲ್ಲಿ ಇರುವಂತಹ ಹೂಡಿಕೆದಾರ ಸ್ನೇಹಿ ವಾತಾವರಣ ದೇಶದ ಯಾವುದೇ ರಾಜ್ಯದಲ್ಲೂ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟರು.
ಕಳೆದ ಮೂರು ತ್ರೈಮಾಸಿಕಗಳಲ್ಲಿ ವಿದೇಶಿ ನೇರ ಹೂಡಿಕೆ(ಎಫ್‌ಡಿಐ )ಆಕರ್ಷಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಚಿವರು ಸುಬೀರ್ ಚಕ್ರವರ್ತಿ ಅವರಿಗೆ ತಿಳಿಸಿದರು.

ಪ್ರಮುಖ ಸುದ್ದಿ :-   ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement