ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ: ಹವಾಮಾನ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಪಶ್ಚಿಮ ಭಾಗಗಳಲ್ಲಿ ಇಂದು, ಗುರುವಾರ ಮಳೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು (ಗುರುವಾರ) ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದು ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದೆ.
ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ. ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಬಿಸಿಗಾಳಿಯ ಪರಿಸ್ಥಿತಿಗಳು ಮುಂದುವರಿಯಲಿದೆ ಎಂದು ಅದು ಹೇಳಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement