ವಿಧಾನ ಪರಿಷತ್‌ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ

posted in: ರಾಜ್ಯ | 0

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು, ಗುರುವಾರ ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕಳುಹಿಸುತ್ತೇನೆ ಎಂದು ತಿಳಿಸಿದ್ದರು.
ಸ್ವಾಭಿಮಾನ ಹಾಗೂ ರಾಜ್ಯದ ಹಿತ ದೃಷ್ಡಿಯಿಂದ ರಾಜೀನಾಮೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ನಲ್ಲಿ ಸ್ವಾಭಿಮಾನ ಉಳಿಸಿಕೊಂಡು ಇರಲು ಸಾಧ್ಯವಿಲ್ಲ. 1994ರಲ್ಲಿ ಉಂಟಾದ ರಾಜಕೀಯ ಪರಿಸ್ಥಿತಿ 2022ರಲ್ಲೂ ಆಗಲಿದೆ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ. ಪಂಚರಾಜ್ಯ ಚುನಾವಣೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಅಲ್ಲದೆ, ಶೀಘ್ರವೇ ಎಚ್‌.ಡಿ.ದೇವೇಗೌಡರು, ಕುಮಾರಸ್ವಾಮಿ ಜೊತೆ ಕುಳಿತು ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ದೇವೇಗೌಡರ ಜೊತೆ ತೆಲಂಗಾಣ ಸಿಎಂ ಕೆಸಿಆರ್‌ ಮಾತುಕತೆ: 3 ತಿಂಗಳು ಕಾಯಿರಿ, ದೇಶದಲ್ಲಿ ಬಹುದೊಡ್ಡ ಬದಲಾವಣೆಯಾಗುತ್ತೆ-ಕೆಸಿಆರ್‌
advertisement

ನಿಮ್ಮ ಕಾಮೆಂಟ್ ಬರೆಯಿರಿ