ಕಳೆದುಹೋದ ತನ್ನ ಲಗೇಜ್ ಮರಳಿ ಪಡೆಯಲು ಇಂಡಿಗೋ ವಿಮಾನಯಾನ ಸಂಸ್ಥೆ ವೆಬ್‌ಸೈಟ್‌ ಹ್ಯಾಕ್‌ ಮಾಡಿ ಹುಡುಕಿದ ಬೆಂಗಳೂರು ಟೆಕ್ಕಿ..!

ಬೆಂಗಳೂರು : ಇಂಡಿಗೋ ವಿಮಾನದಲ್ಲಿ ಪಾಟ್ನಾದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ನಾಪತ್ತೆಯಾಗಿದ್ದ ತಮ್ಮ ಲಗೇಜ್‌ ಪಡೆಯಲು ವಿಫಲವಾದ ನಂತರ ವೆಬ್ಸೈಟ್ ಅನ್ನೇ ಹ್ಯಾಕ್ ಮಾಡಿ ಹುಡುಕಿ ಲಗೇಜ್‌ ವಾಪಸ್‌ ಪಡೆದ ವಿದ್ಯಮಾನ ವರದಿಯಾಗಿದೆ..
ನಂದನಕುಮಾರ್ ಎಂಬ ಸಾಫ್ಟ್‌ವೇರ್ ಇಂಜಿನಿಯರ್ ಪಾಟ್ನಾದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಅವರ ವಸ್ತುಗಳು ಸಹ ಪ್ರಯಾಣಿಕರೊಬ್ಬರಿಗೆ ಬದಲಾಗಿತ್ತು. ಅದು ನಂದನಕುಮಾರ್ ತನ್ನ ಡೆವಲಪರ್ ಕೌಶಲ್ಯಗಳನ್ನು ಒಳ್ಳೆಯದಕ್ಕಾಗಿ ಬಳಸಿಕೊಳ್ಳುವಂತೆ ಪ್ರೇರೇಪಿಸಿತು.
ಡೆವಲಪರ್ ಕೌಶಲ್ಯ ಏರ್‌ಲೈನ್‌ನ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡುವ ಮೂಲಕ ಕಳೆದುಹೋದ ವಸ್ತುಗಳನ್ನು ಮರಳಿ ಪಡೆದಿರುವದಾಗಿ ಅವರೇ ಟ್ವೀಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಸಹ ಮಾಡಿರುವ ನಂದನಕುಮಾರ ಅವರು, ಇಂಡಿಗೋ ಏರ್‌ಲೈನ್‌ನ ವೆಬ್‌ಸೈಟ್‌ನ ಭದ್ರತೆಯಲ್ಲಿನ ನ್ಯೂನತೆಗಳಿಂದಾಗಿ ತಮ್ಮ ಲಗೇಜ್ ಅನ್ನು ಹೇಗೆ ಹಿಂಪಡೆದರು ಎಂಬ ಬಗ್ಗೆ ಹೇಳಿಕೊಂಡಿದ್ದಾರೆ
ಇಂಡಿಗೋ ವೆಬ್‌ಸೈಟ್‌ನ ಭದ್ರತೆಯಲ್ಲಿನ ನ್ಯೂನತೆಗಳನ್ನು ಸಹ ಉಲ್ಲೇಖಿಸಿದ್ದಾರೆ. ಒಂದೇ ರೀತಿಯ ಬ್ಯಾಗ್ ಆಗಿದ್ದರಿಂದ ಸಹ ಪ್ರಯಾಣಿಕರೊಬ್ಬರು ತನ್ನ ಬ್ಯಾಗ್ ಪಡೆದುಕೊಂಡಿದ್ದಾರೆ ಎಂದು ಕುಮಾರ್ ವಿವರಿಸಿದ್ದಾರೆ.
ನಾನು ನಿನ್ನೆ ಇಂಡಿಗೋ (SIC) 6E-185 ವಿಮಾನದಲ್ಲಿ ಪಾಟ್ನಾದಿಂದ ಬೆಂಗಳೂರಿಗೆ ಪ್ರಯಾಣಿಸಿದೆ. ಈ ವೇಳೆ ನನ್ನ ಲಗೇಜ್ ಬ್ಯಾಗ್ ಹಾಗೂ ಸಹ ಪ್ರಯಾಣಿಕರೊಬ್ಬರ ಲಗೇಜ್‌ಬ್ಯಾಗ್ ಒಂದೇ ಬಣ್ಣ ಹೋಲುವುದಾಗಿದ್ದರಿಂದ ಅದಲು ಬದಲಾಗಿಬಿಟ್ಟಿತು. ಅದನ್ನು ಮರಳಿ ಪಡೆಯುವ ಸಲುವಾಗಿ ಗ್ರಾಹಕಸೇವಾ ಸಂಖ್ಯೆಗೆ ಕರೆ ಮಾಡಿ, ಲಗೇಜ್ ಅನ್ನು ಪತ್ತಹಚ್ಚಲು ಸಾಧ್ಯವಾಗುವ ಎಲ್ಲ ಪ್ರೋಟೋಕಾಲ್‌ಗಳನ್ನು ಅನುಸರಿಸಿದೆ. ಆದರೆ ಅದಕ್ಕೆ ಪರಿಹಾರ ಸಿಗಲಿಲ್ಲ. ಗ್ರಾಹಕಸೇವಾ ತಂಡವು ಗೌಪ್ಯತೆ ಮತ್ತು ಮಾಹಿತಿ ಭದ್ರತಾ ದೃಷ್ಟಿಯಿಂದ ವ್ಯಕ್ತಿಯ ಸಂಪರ್ಕವನ್ನೂ ಸಹ ನನಗೆ ತಿಳಿಸಲಿಲ್ಲ. ಮರುದಿನ ಕರೆ ಮಾಡಿದರೂ ಗ್ರಾಹಕ ಸೇವಾ ಏಜೆಂಟ್ ನನ್ನ ಕರೆಗಳನ್ನು ಸ್ವೀಕರಿಸಲೇ ಇಲ್ಲ. ಎಷ್ಟೇ ಪ್ರಯತ್ನಿಸಿದರೂ ಲಗೇಜ್ ಸಹ ಪ್ರಯಾಣಿಕನನ್ನು ಪತ್ತೆಹಚ್ಚುವ ಎಲ್ಲ ಕಾರ್ಯಗಳು ವಿಫಲಗೊಂಡವು ಎಂದು ಹೇಳಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ನಂತರ ನಾನು ಸ್ವ ಪ್ರಯತ್ನದಿಂದ ಸಹ ಪ್ರಯಾಣಿಕನನ್ನು ಪತ್ತೆಹಚ್ಚಲು ಮುಂದಾದೆ. ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದರಿಂದ ಹ್ಯಾಕಿಂಗ್ ವಿಧಾನ ಬಳಸಿಕೊಂಡೆ. @INDIGO-6E ವೆಬ್‌ಸೈಟ್‌ನಲ್ಲಿ ಡೆವಲಪರ್ ಕನ್ಸೋಲ್ ಅನ್ನು ತೆರೆದು ನೆಟ್‌ವರ್ಕ್ ಲಾಗ್ ರೆಕಾರ್ಡ್ ಆನ್(SIC) ನಲ್ಲಿ ಸಂಪೂರ್ಣ ಚೆಕ್-ಇನ್ ಫ್ಲೋ ಪ್ರಾರಂಭಿಸಿದೆ. ಡೆವಲಪರ್ ಪರಿಕರಗಳ ಮೂಲಕ ಅವರು ತನ್ನ ಬ್ಯಾಗ್ ಅನ್ನು ಪಡೆದುಕೊಂಡ ಪ್ರಯಾಣಿಕನ ಪಿಎನ್‌ಆರ್ ಸಂಖ್ಯೆ ಪತ್ತೆಹಚ್ಚಿದ್ದಾರೆ. ಈ ಮೂಲಕ ಗ್ರಾಹಕರ ವಿವರಗಳನ್ನು ಕಂಡುಕೊಂಡಿದ್ದಾರೆ. ನಂತರ ಸಹ-ಪ್ರಯಾಣಿಕನನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದೆ. ನನ್ನ ಬ್ಯಾಗ್ ಸಹ ಮರಳಿ ಪಡೆದುಕೊಂಡೆ ಎಂದು ತಿಳಿಸಿದ್ದಾರೆ.
ಇದಾದ ನಂತರ ತಮ್ಮ ಗ್ರಾಹಕ ಸೇವೆಯನ್ನು ಸುಧಾರಿಸುವಂತೆ ಇಂಡಿಗೋಗೆ ಸಲಹೆಗಳನ್ನು ನೀಡಿದ್ದಾರೆ. ಇಂಡಿಗೋ ಏರ್‌ಲೈನ್ಸ್ ಹೊಂದಿರುವ ಕೆಲವು ಲೋಪದೋಷಗಳನ್ನು ಕುಮಾರ್ ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಇಂಡಿಗೋ, ಉಂಟಾದ ಅನಾನುಕೂಲತೆಗಾಗಿ ವಿಷಾದ ವ್ಯಕ್ತಪಡಿಸಿದೆ. ಹಾಗೂ ವೆಬ್‌ಸೈಟ್‌ಗೆ ಯಾವುದೇ ಭದ್ರತಾ ಲೋಪಗಳಿಲ್ಲ ಎಂಬ ಬಗ್ಗೆ ಭರವಸೆ ನೀಡಿದೆ. ಇದು ಅತ್ಯಂತ ನೈತಿಕ ಮಾರ್ಗವಲ್ಲದಿದ್ದರೂ, ಕನಿಷ್ಠ ನಂದನಕುಮಾರ್ ಅವರು ತನ್ನ ಬ್ಯಾಗ್ ಅನ್ನು ಮರಳಿ ಪಡೆದಿದ್ದಾರೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement