ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ವಸ್ತುಗಳ ಧ್ವಂಸ: 8 ಮಂದಿ ಬಂಧನ; ಎಸ್‌ಐಟಿ ತನಿಖೆಗೆ ದೆಹಲಿ ಹೈಕೋರ್ಟ್‌ಗೆ ಎಎಪಿ ಮನವಿ

ನವದೆಹಲಿ: ನಿನ್ನೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆ ಮುಂದಿನ ಗೇಟ್‌ ಹಾಗೂ ಸಿಸಿಟವಿ ಧ್ವಂಸ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಇನ್ನೂ ಕೆಲವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ದೆಹಲಿ ಪೊಲೀಸರ ವಿರುದ್ಧ ಎಸ್‌ಐಟಿ ತನಿಖೆಗೆ ಆಗ್ರಹಿಸಿ ಆಮ್ ಆದ್ಮಿ ಪಕ್ಷ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಮುಖ್ಯಮಂತ್ರಿ ಕೇಜ್ರಿವಾಲ್‌ ಮನೆ ಸುತ್ತ ಮುತ್ತಲಿನ ಸಿಸಿಟಿವಿ ಕ್ಯಾಮೆರಾ ಒಡೆದಿದ್ದು, ಮನೆ ಸುತ್ತಲಿನ ಭದ್ರತಾ ತಡೆಗೋಡೆ ಒಡೆದಿದೆ ಎಂದು ವರದಿಯಾಗಿದೆ.

ದೆಹಲಿ ವಿಧಾನಸಭೆಯಲ್ಲಿ ಮಾಡಿದ ಭಾಷಣದಲ್ಲಿ, ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್ಸ್ ಪ್ರಚಾರಕ್ಕಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಮುಖ್ಯಮಂತ್ರಿ ನಿವಾಸದ ಮೇಲಿನ ದಾಳಿಯ ನಂತರ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು “ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.
ಮತ್ತೊಬ್ಬ ಎಎಪಿ ನಾಯಕ ಸೌರಭ ಭಾರದ್ವಾಜ್ ಕೂಡ ಬಿಜೆಪಿಯು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಪ್ರಮುಖ ಸುದ್ದಿ :-   ಅದೃಷ್ಟ ಅಂದ್ರೆ ಇದೇ ಅಲ್ವಾ | ಕೇವಲ 2 ಮೀನುಗಳ ಮಾರಾಟದಿಂದ ಲಕ್ಷಾಧಿಪತಿಯಾದ ಮೀನುಗಾರ..! ಮೀನಿನ ಬೆಲೆ ಕೇಳಿದ್ರೆ ಹೌಹಾರಬೇಕು...!!

ಬುಧವಾರ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಕೇಜ್ರಿವಾಲ್ ಅವರ ನಿವಾಸದ ಮುಂದಿನ ಕೆಲವು ವಸ್ತುಗಳನ್ನು ಧ್ವಂಸಗೊಳಿಸಿದರು.
ಕಾಶ್ಮೀರ ಹಿಂದೂಗಳ ಹತ್ಯಾಕಾಂಡಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಪಹಾಸ್ಯದ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿತು. ಯುವ ಮೋರ್ಚಾ ಕೇಜ್ರಿವಾಲ್‌ರಿಂದ ಬೇಷರತ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದೆ. ಅವರು ಕ್ಷಮೆ ಕೇಳುವವರೆಗೂ ಯುವಮೋರ್ಚಾದ ಪ್ರತಿಭಟನೆ ಮುಂದುವರಿಯಲಿದೆ. ರಾಮಮಂದಿರವನ್ನು ಗೇಲಿ ಮಾಡುವುದು, ಹಿಂದೂ ದೇವತೆಗಳ ಬಗ್ಗೆ ತಮಾಷೆ ಮಾಡುವುದು, ಬಟ್ಲಾ ಹೌಸ್ ಅನ್ನು ಪ್ರಶ್ನಿಸುವುದು, ಸರ್ಜಿಕಲ್ ಸ್ಟ್ರೈಕ್‌ಗಳನ್ನು ಪ್ರಶ್ನಿಸುವುದು ಆಮ್ ಆದ್ಮಿ ಪಕ್ಷದ ನೀತಿಯಾಗಿದೆ ಎಂದು ತೇಜಸ್ವಿ ಸೂರ್ಯ ಹೇಳಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement