ಹುಬ್ಬಳ್ಳಿ: ರಾಜ್ಯ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರ 45 ವರ್ಷಗಳ ಸುದೀರ್ಘ ಹೋರಾಟ ವಿಧಾನ ಪರಿಷತ್ತಿನ ಸದಸ್ಯರಾಗಿ 42 ವರ್ಷ ಪೂರೈಸಿದ ಸಾರ್ಥಕ ಸೇವೆ ಕುರಿತ ಕಿರು ಹೊತ್ತಿಗೆ ‘ಬಸವರಾಜ ಪಥ’ ಪುಸ್ತಕ ಬಿಡುಗಡೆ ಕಾರ್ಯಕ್ರಮ ಏಪ್ರಿಲ್ 3ರಂದು ಬೆಳಿಗ್ಗೆ 10:30 ಗಂಟೆಗೆ ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಬಯೋಟೆಕ್ನಾಲಜಿ ಅಡಿಟೋರಿಯಂನಲ್ಲಿ ನಡೆಯಲಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಾನಿಧ್ಯವನ್ನು ತೊಂಟದಾರ್ಯಮಠದ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಗ ಜಗದೀಶ ಶೆಟ್ಟರ ಉದ್ಘಾಟಿಸುವರು. ಕೆ.ಎಲ್.ಇ. ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಿರು ಹೊತ್ತಿಗೆ ಬಿಡುಗಡೆಯನ್ನು ಮಾಜಿ ಸಂಸದರು ವಿ.ಆರ್.ಎಲ್ ಸಮೂಹ ಉದ್ಯಮಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ ಬಸವರಾಜ ಪಥ’ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಪಿ. ಈಶ್ವರ ಭಟ್ ಆಗಮಿಸಲಿದ್ದಾರೆ. ಕೆ.ಎಲ್.ಇ. ಸಂಸ್ಥೆಯ ನಿರ್ದೇಶಕರಾದ ಶಂಕರಣ್ಣ ಮುನವಳ್ಳಿ ಉಪಸ್ಥಿತರಿರುವರು ಎಂದು ಮಾಧ್ಯಮಿಕ ಶಾಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಭಟ್ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ