ಭಾಸ್ಕರ ರಾವ್ ಸ್ವಯಂ ನಿವೃತ್ತಿ ಮನವಿ ಅರ್ಜಿ ಅಂಗೀಕರಿಸಿದ ಕೇಂದ್ರ ಸರ್ಕಾರ

posted in: ರಾಜ್ಯ | 0

ಬೆಂಗಳೂರು: ರೈಲ್ವೆ ವಿಭಾಗದ ಎಡಿಜಿಪಿ ಭಾಸ್ಕರ ರಾವ್ ಅವರು ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.
ಕಳೆದ 7 ತಿಂಗಳಿಂದ ಕೇಂದ್ರ ಅದಕ್ಕೆ ಸಮ್ಮತಿ ನೀಡಿರಲಿಲ್ಲ. ಈಗ ಅನುಮೋದನೆ ನೀಡಿದೆ.
2021 ಸೆಪ್ಟೆಂಬರ್‌ನಲ್ಲಿ ಸ್ವಯಂನಿವೃತ್ತಿಗೆ ಅರ್ಜಿ ಸಲ್ಲಿಸಿದ್ದ ಭಾಸ್ಕರ್ ರಾವ್, ಅದನ್ನು ತಕ್ಷಣ ಪರಿಗಣಿಸುವಂತೆ ಮನವಿ ಮಾಡಿದ್ದರು.
ಭಾಸ್ಕರ್ ರಾವ್ 1990ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು. 2019-20ರ ಅವಧಿಯಲ್ಲಿ ಬೆಂಗಳೂರು ನಗರದ ಪೊಲೀಸ್ ಆಯಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗ ಸೇರಿ ವಿವಿಧೆಡೆ ಕಾರ್ಯ ನಿರ್ವಹಿಸಿದ್ದರು.
ಭಾಸ್ಕರ್ ರಾವ್ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳು ಸಾರ್ವಜನಿಕ ವಲಯಗಳಲ್ಲಿ ಹರಿದಾಡುತ್ತಿವೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಜೂನ್ 21ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ
advertisement

ನಿಮ್ಮ ಕಾಮೆಂಟ್ ಬರೆಯಿರಿ