ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ 115ನೇ ಜಯಂತಿ: ಟ್ವೀಟ್‌ ಮೂಲಕ ಗೌರವ ನಮನ ಸಲ್ಲಿಸಿದ ಮೋದಿ

posted in: ರಾಜ್ಯ | 0

ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು, ‘ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಅವರ ಅಪ್ರತಿಮ ಸಮುದಾಯ ಸೇವೆ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಅವರು ನೀಡಿದ ಕೊಡುಗೆಯನ್ನು ನಾವು ಯಾವಾಗಲೂ ಸ್ಮರಿಸುತ್ತೇವೆ. ಅವರ ಕನಸುಗಳನ್ನು ಈಡೇರಿಸಲು ನಾವು ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಹೇಳಿದ್ದಾರೆ.

ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗು ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

ಓದಿರಿ :-   ರಾಜ್ಯ ಸಭಾ ಚುನಾವಣೆ: ಜೈರಾಮ ರಮೇಶ್ ಕಾಂಗ್ರೆಸ್ ಅಭ್ಯರ್ಥಿ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ