ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 250 ರೂ.ಗಳಷ್ಟು ಏರಿಕೆ

ನವದೆಹಲಿ: 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ 250 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು,ಪರಿಷ್ಕೃತ ದರ ಇಂದಿನಿಂದಲೇ (ಏಪ್ರಿಲ್‌ 1) ಜಾರಿಗೆ ಬರಲಿದೆ. ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಮಾಡಿಲ್ಲ.
ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವ ಕಾರಣ ಇದೀಗ ಗ್ರಾಹಕರು 250 ರೂ.ಗಳಷ್ಟು ಹೆಚ್ಚುವರಿ ಸೇರಿದಂತೆ ಪ್ರತಿ ವಾಣಿಜ್ಯ ಬಳಕೆ ಸಿಲಿಂಡರ್‌ಗೆ 2,253 ರೂ. ಪಾವತಿ ಮಾಡಬೇಕಾಗಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 105 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 250 ರೂ. ಹೆಚ್ಚಳ ಮಾಡಲಾಗಿದೆ.
ಕಳೆದ ಎರಡು ತಿಂಗಳಲ್ಲಿ, 19-ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ರೂ 346 ರೂ.ಗಳಿಗೆ ಸಿಲಿಂಡರ್‌ ಬೆಲೆ ಹೆಚ್ಚಿಸಲಾಗಿದೆ. ಈ ಹಿಂದೆ ಮಾರ್ಚ್ 1 ರಂದು 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು 105 ರೂ.ಗಳಷ್ಟು ಹೆಚ್ಚಿಸಲಾಯಿತು ಮತ್ತು ನಂತರ ಮಾರ್ಚ್ 22 ರಂದು ಅದರ ಬೆಲೆಯನ್ನು 9 ರೂ.ಗಳಷ್ಟು ಕಡಿಮೆಗೊಳಿಸಲಾಯಿತು. ಆದರೆ ವಾಣಿಜ್ಯ ಅನಿಲ ಸಿಲಿಂಡರುಗಳಲ್ಲಿ. ಹೆಚ್ಚಳವಾಗುತ್ತಿದ್ದು, ಆದರೆ ಗೃಹಬಳಕೆಯ LPG ಸಿಲಿಂಡರುಗಳಲ್ಲಿ ಬೆಲೆ ಏರಿಕೆಯಾಗಲಿಲ್ಲ ಎಂಬ ಸಮಾಧಾನವಿದೆ.
ವಾಣೀಜ್ಯ ಬಳಕೆಯ ಸಿಲಿಂಡರ್ ಈಗ ಕೋಲ್ಕತ್ತಾದಲ್ಲಿ 2,351 ರೂ., ಮುಂಬೈನಲ್ಲಿ 2,205 ರೂ. ಮತ್ತು ಚೆನ್ನೈನಲ್ಲಿ 2,406 ರೂ. ಗಳಷ್ಟಾಗಿದೆ.
ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾಸಿಕ ಪರಿಷ್ಕರಿಸಲಾಗುತ್ತದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯವಾಗಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಅನಿಲ ಬೆಲೆ ಏರಿಕೆಯಾಗಿದೆ.
ಈ ನಡುವೆ ಪೆಟ್ರೋಲ್ ಮತ್ತು ಡೀಸಲ್ ದರ ಕೂಡ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.27 ರೂ.ಗಳನ್ನು ತಲುಪಿದೆ.

ಪ್ರಮುಖ ಸುದ್ದಿ :-   'ಅಕ್ರಮ' ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement