ಸಾಬರಮತಿ ಪುನರಾಭಿವೃದ್ಧಿ ಪ್ರಶ್ನಿಸಿ ಅರ್ಜಿ ವಿಚಾರಣೆ: ಹೊಸದಾಗಿ ಪ್ರಕರಣ ಆಲಿಸಲು ಗುಜರಾತ್‌ ಹೈಕೋರ್ಟ್‌ಗೆ ಸೂಚಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಪ್ರಸ್ತಾವಿತ ಸಾಬರಮತಿ ಆಶ್ರಮದ ಪುನರಾಭಿವೃದ್ಧಿ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ಶುಕ್ತವಾರ ಬದಿಗೆ ಸರಿಸಿದ್ದು , ಹೊಸದಾಗಿ ಪ್ರಕರಣವನ್ನು ಆಲಿಸುವಂತೆ ಸೂಚಿಸಿ ಪ್ರಕರಣವನ್ನು ಗುಜರಾತ್‌ ಹೈಕೋರ್ಟ್‌ಗೆ ಮರಳಿಸಿದೆ.
ಸಾಬರಮತಿ ಆಶ್ರಮದ ಪುನರಾಭಿವೃದ್ಧಿ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮಹಾತ್ಮ ಗಾಂಧೀಜಿ ಮರಿ ಮೊಮ್ಮಗ ತುಷಾರ್‌ ಗಾಂಧಿಯವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾ. ಡಿ ವೈ ಚಂದ್ರಚೂಡ್ ಹಾಗೂ ನ್ಯಾ. ಸೂರ್ಯ ಕಾಂತ್‌ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಪ್ರಕರಣದ ವಿಚಾರಣೆ ವೇಳೆ ಗುಜರಾತ್‌ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ ಅವರು, ಪ್ರಕರಣವನ್ನು ನಿಯಮಿತವಾಗಿ ಅಲಿಸಲು ತಾವು ಹೈಕೋರ್ಟ್‌ಗೆ ಮನವಿ ಮಾಡುವುದಾಗಿ ಹೇಳಿದರು. ಇದೇ ವೇಳೆ, ಪ್ರಕರಣದ ಅರ್ಹತೆಯ ಕುರಿತಾಗಿ ಯಾವುದೇ ಅಭಿಪ್ರಾಯವನ್ನು ಸೂಚಿಸದಂತೆ ಸರ್ವೋಚ್ಚ ನ್ಯಾಯಾಲಯವನ್ನು ಕೋರಿದರು.
ಅರ್ಜಿದಾರರ ಪರವಾಗಿ ವಾದಿಸಿದ ಇಂದಿರಾ ಜೈಸಿಂಗ್ ಅವರು, ಹೈಕೋರ್ಟ್‌ ಯಾವುದೇ ಆದೇಶವನ್ನು ಮಾಡುವ ಮೊದಲು ಸಾಬರಮತಿ ಆಶ್ರಮದ ನಿರ್ವಹಣೆಯನ್ನು ಪಸ್ತುತ ನಡೆಸುತ್ತಿರುವ ಟ್ರಸ್ಟ್‌ನ ವಾದವನ್ನು ವಿಷದವಾಗಿ ಅಲಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರದಿಂದ ಯಾವುದೇ ಅಫಿಡವಿಟ್‌ ಸಲ್ಲಿಕೆಗೆ ಹೈಕೋರ್ಟ್‌ ಸೂಚಿಸದೆ ತಮ್ಮ ಮನವಿಯನ್ನು ವಿಲೇವಾರಿ ಮಾಡಿರುವ ಬಗ್ಗೆ ಅರ್ಜಿದಾರರು ಗಮನಸೆಳೆದದ್ದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್‌ ಪ್ರಕರಣವನ್ನು ಹೊಸದಾಗಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಹೈಕೋರ್ಟ್‌ಗೆ ಸೂಚಿಸಿ ಪ್ರಕರಣವನ್ನು ಮರಳಿಸಿತು.

ಪ್ರಮುಖ ಸುದ್ದಿ :-   ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement