ಅಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ: ಮೃತರ ಸಂಖ್ಯೆ 12ಕ್ಕೆ ಏರಿಕೆ

ಅಫ್ಘಾನಿಸ್ತಾನ : ಅಫ್ಘಾನಿಸ್ತಾನದ ಪಶ್ಚಿಮ ಪ್ರಾಂತ್ಯದ ಹೆರಾತ್‌ನಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೆರಾತ್ ನಗರದ ಪಿಡಿ 12ರಲ್ಲಿ ಶುಕ್ರವಾರ ಘಟನೆ ನಡೆದಿದ್ದು, ಘಟನೆ ನಡೆದ ದಿನದಂದು ಏಳು ಮಂದಿ ಸಾವನ್ನಪ್ಪಿದ್ದರು. ಶನಿವಾರ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ಪ್ರಾಂತೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ ಎಂಬುದಾಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಸ್ಪೋಟಕಗಳನ್ನು ಆಟದ ಮೈದಾನದಲ್ಲಿ ಹೂತಿಡಲಾಗಿತ್ತು. ಯುವಕರು ಆಟವಾಡುತ್ತಿದ್ದ ವೇಳೆ ಇದು ಸ್ಫೋಟಗೊಂಡಿದೆ ಎನ್ನಲಾಗಿದೆ. ಸ್ಪೋಟದ ಹೊಣೆಯನ್ನು ಯಾವುದೇ ಸಂಘಟನೆಗಳು ಈವರೆಗೆ ಹೊತ್ತುಕೊಂಡಿಲ್ಲ.
ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಅಫ್ಘಾನಿಸ್ತಾನದಲ್ಲಿ ಹಲವಾರು ದಾಳಿಗಳು ನಡೆದಿವೆ. ಹೆರಾತ್ ನಗರದಲ್ಲಿ ಕಳೆದ ಜನವರಿಯಲ್ಲಿ ಘಟಿಸಿದ ಸ್ಫೋಟದಲ್ಲಿ ಏಳು ಮಂದಿ ಮೃತಪಟ್ಟಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   1955ರ ಮರ್ಸಿಡಿಸ್-ಬೆಂಜ್ 300 SLR ಕಾರು ಮಾರಾಟವಾದ ದುಬಾರಿ ಕಾರು...ಮೊತ್ತ ಕೇಳಿದರೆ ಬೆಚ್ಚಿ ಬೀಳ್ತೀರಾ..!
advertisement

ನಿಮ್ಮ ಕಾಮೆಂಟ್ ಬರೆಯಿರಿ