ಭಾರತದಲ್ಲಿ ಈ ವರ್ಷದ ಮಾರ್ಚ್‌ನಲ್ಲಿ 122 ವರ್ಷಗಳಲ್ಲೇ ಅತಿ ಹೆಚ್ಚು ಉಷ್ಣತೆ ದಾಖಲು…!

ನವದೆಹಲಿ: ಭಾರತದಲ್ಲಿ ದಾಖಲೆಯ ಸರಾಸರಿ ಉಷ್ಣಾಂಶ ದಾಖಲಾಗಿದ್ದು, ಅದರ ಪರಿಣಾಮ ಏಪ್ರಿಲ್​ನಲ್ಲೂ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಏಪ್ರಿಲ್​ನ ಮೊದಲ 10-15 ದಿನಗಳಲ್ಲಿ ಅತ್ಯಂತ ಉಷ್ಣಹವಾಮಾನ ಇರಲಿದ್ದು, ತೀವ್ರವಾದ ಶಾಖದ ಅಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
2022ರ ಈ ಮಾರ್ಚ್​ನಲ್ಲಿ ಮಾಸಿಕ ಸರಾಸರಿ ಉಷ್ಣಾಂಶ 122 ವರ್ಷಗಳಲ್ಲೇ ಅತ್ಯಧಿಕ ಉಷ್ಣತೆ ದಾಖಲಾಗಿದೆ. 1901ರ ಮಾರ್ಚ್​ನಲ್ಲಿ ಮಾಸಿಕ ಸರಾಸರಿ ಉಷ್ಣಾಂಶ 33.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಅದಾದ ಬಳಿಕ ಈ ವರ್ಷ ಮತ್ತೆ ಅಷ್ಟೇ ಮಾಸಿಕ ಸರಾಸರಿ ಉಷ್ಣಾಂಶ ಕಂಡುಬಂದಿದೆ ಎಂದು ಹವಾಂಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
2010ರ ಮಾರ್ಚ್​ನಲ್ಲಿ 33.09 ಡಿಗ್ರಿ ಸೆಲ್ಸಿಯಸ್ ಮಾಸಿಕ ಸರಾಸರಿ ಉಷ್ಣಾಂಶ ದಾಖಲಾಗಿದ್ದರೂ ಈಗಿನ 33.1 ಡಿಗ್ರಿ ಸೆಲ್ಸಿಯಸ್ ಸರಾಸರಿ ಮಾಸಿಕ ಉಷ್ಣಾಂಶ 122 ವರ್ಷಗಳಲ್ಲೇ ಅತ್ಯಧಿಕ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಧಿಕ ತಾಪಮಾನದಿಂದ ವಾಯವ್ಯ ಭಾರತ ಅತಿ ಹೆಚ್ಚು ಬಾಧೆಗೆ ಒಳಗಾಗಲಿದೆ ಎಂದು ಹವಾಮಾನ ಅಧಿಕಾರಿಗಳು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

ಮಾರ್ಚ್‌ನಲ್ಲಿ ದೇಶದ ಸರಾಸರಿ ತಾಪಮಾನ 26.67 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಮಾರ್ಚ್ 2010 ರಲ್ಲಿ ದಾಖಲಾದ 26.671 ಡಿಗ್ರಿ ಸೆಲ್ಸಿಯಸ್ ನಂತರ ಎರಡನೇ ಅತಿ ಹೆಚ್ಚು ಎಂದು ಹವಾಮಾನ ಇಲಾಖೆ ಹೇಳಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement