ಕಣಿವೆಗೆ ಉರುಳಿ ಬಿದ್ದ ಟ್ರಕ್: 7 ಸಾವು, 14 ಮಂದಿಗೆ ಗಾಯ

ತಿರುಪತ್ತೂರ: ದೇವಸ್ಥಾನಕ್ಕೆ ತೆರಳುತ್ತಿದ್ದ ಟ್ರಕ್ ಕಣಿವೆಗೆ ಬಿದ್ದ ಪರಿಣಾಮ 7 ಮಂದಿ ಮೃತಪಟ್ಟು, 14 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಸೆಂಬರೈ ಗ್ರಾಮದಲ್ಲಿ ನಡೆದಿದೆ.

ದೇವಾಲಯವು ಸೆಂಬರೈ ಗ್ರಾಮದ ಬೆಟ್ಟದ ಮೇಲಿದೆ. ಈ ದೇವಾಲಯಕ್ಕೆ ತೆರಳುವಾಗ ವಾಹನದ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಮಹಿಳೆಯರೂ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 14 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ತೆರಳಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಘಟನೆ ಕುರಿತು ಸ್ಥಳದಲ್ಲಿದ್ದವರು ವೀಡಿಯೋ ಮಾಡಿದ್ದು, ನೀರಿನ ಬಾಟಲಿಗಳು ಮತ್ತು ಚಪ್ಪಲಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಗಾಯಗೊಂಡವರು ಮತ್ತು ಮಕ್ಕಳು ನೆಲದಲ್ಲಿ ಬಿದ್ದುಕೊಂಡಿರುವ ದೃಶ್ಯ ಮನಕಲಕುವಂತಿದೆ ಎಂಬುದಾಗಿ ವರದಿ ತಿಳಿಸಿದೆ.ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement