ಕಾರ್ಖಾನೆ ಯಂತ್ರಕ್ಕೆ ವೇಲ್ ಸಿಲುಕಿ ಯುವತಿ ಸಾವು

posted in: ರಾಜ್ಯ | 0

ಬೆಂಗಳೂರು: ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯಂತ್ರಕ್ಕೆ ವೇಲ್ ಸಿಲುಕಿಕೊಂಡು ಯುವತಿಯೊಬ್ಬರು ಮೃತಪಟ್ಟ ಘಟನೆ ಚಂದ್ರಾಲೇಔಟ್‌ನ ನಾಯಂಡಹಳ್ಳಿಯಲ್ಲಿ ಇಂದು, ಭಾನುವಾರ ಬೆಳಿಗ್ಗೆ ನಡೆದಿದೆ.
ಗಂಗೊಂಡನಹಳ್ಳಿಯ ಶಾಜಿಯಾ ಬಾನು(೨೮)ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಯಂಡಹಳ್ಳಿಯ ಕೈಗಾರಿಕಾ ಪ್ರದೇಶದ ಜಡ್ ಎಸ್ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಶಾಜಿಯಾ ಬಾನು ಕೆಲಸ ಮಾಡುತ್ತಿದ್ದ ವೇಳೆ ಅವರ ವೇಲ್ ಮಷಿನ್‌ಗೆ ಸಿಲುಕಿ ತಲೆಗೆ ಗಂಭೀರವಾಗಿ ಗಾಯವಾಗಿತ್ತು.ತಕ್ಷಣ ಕಾರ್ಖಾನೆ ಸಿಬ್ಬಂದಿ ಶಾಜಿಯಾ ಬಾನು ಅವರನ್ನು ಮೊದಲು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಿಮಾನ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಂದ್ರಲೇಔಟ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಐತಿಹಾಸಿಕ ಚಿತ್ರದುರ್ಗ ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆ
advertisement

ನಿಮ್ಮ ಕಾಮೆಂಟ್ ಬರೆಯಿರಿ