ನಿವೃತ್ತ ಐಪಿಎಸ್ ಅಧಿಕಾರಿ ಬಿ.ಭಾಸ್ಕರ್ ರಾವ್ ನಾಳೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ:ವರದಿ

ಬೆಂಗಳೂರು : ರೈಲ್ವೆ ಪೊಲೀಸ್ ಎಡಿಜಿಪಿ ಆಗಿದ್ದ ಐಪಿಎಸ್ ಅಧಿಕಾರಿ ಬಿ.ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ (ಎಎಪಿ) ಸೇರಲಿದ್ದಾರೆ.
2021ರ ಸೆಪ್ಟೆಂಬರ್ ನಲ್ಲಿ ತಮ್ಮ ಹುದ್ದೆಗೆ ಭಾಸ್ಕರರಾವ್ ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರ ಕಳೆದ ವಾರ‌ವಷ್ಟೇ ಅಂಗೀಕರಿಸಿತ್ತು.
ನವದೆಹಲಿಯ ದೀನ್ ದಯಾಳ್ ಉಪಾದ್ಯಾಯ ಮಾರ್ಗದಲ್ಲಿರುವ ಆಮ್‌ ಆದ್ಮಿ ಪಕ್ಷದ‌ ಕಚೇರಿಯಲ್ಲಿ ನಾಳೆ ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್​ಗೆ ಸೇರ್ಪಡೆ ಆಗಲಿದ್ದಾರೆ. ಈ ಸಂದರ್ಭ ಪಕ್ಷದ‌ ಹಿರಿಯ ಮುಖಂಡ‌ ಮನೀಷ್ ಸಿಸೋಡಿಯಾ‌ ಮತ್ತಿತರರು ಹಾಜರಿರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement