ಮುಂಬರುವ ವಿಧಾನ ಪರಿಷತ್ತು ಚುನಾವಣೆ ವೇಳೆಗೆ ಬಿಜೆಪಿಗೆ ಸೇರ್ಪಡೆ : ಬಸವರಾಜ ಹೊರಟ್ಟಿ

.ಹುಬ್ಬಳ್ಳಿ: ಮುಂಬರುವ ವಿಧಾನಪರಿಷತ್ತು ಚುನಾವಣೆ ವೇಳೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುವುದಾಗಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಷಯ ಖಚಿತ ಪಡಿಸಿ ಅವರು, ನಾನು ಬಿಜೆಪಿ ಸೇರ್ಪಡೆಯಾಗುವ ಕುರಿತು ಚರ್ಚೆಗಳು ನಡೆಯುತ್ತಿವೆ. ಸೇರ್ಪಡೆಯಾಗುವುದು ಬಹುತೇಕ ಖಚಿತ. ಸಭಾಪತಿ ಸ್ಥಾನದಲ್ಲಿರುವುದರಿಂದ ಚುನಾವಣೆ ವೇಳೆ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಎಲ್ಲರೂ ಬಿಜೆಪಿ ಸೇರ್ಪಡೆಗೆ ಸಹಮತ ವ್ಯಕ್ತ ಪಡಿಸಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರು ಎಲ್ಲರೂ ಸಹಮತ ತೋರಿದ್ದಾರೆ ಎಂದರು.ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ಕೈಗೊಳ್ಳುವೆ ಎಂದು ತಿಳಿಸಿದರು.ಈ ವಿಷಯವನ್ನು ಜೆಡಿಎಸ್ ನಾಐಕ ಎಚ್. ಡಿ. ಕುಮಾರಸ್ವಾಮಿಯವರಿಗೂ ತಿಳಿಸಿದ್ದೇನೆ. ಅವರು ಕೂಡ ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಬಗ್ಗೆ ಒಪ್ಪಿಗೆ ಸೂಚಿಸಿದ್ದಾರೆ. ಎಂದು ಹೇಳಿದ್ದಾರೆ.

ನಾನು ಸಭಾಪತಿ ಇರುವುದರಿಂದ ಅಧಿಕೃತವಾಗಿ ಬಿಜೆಪಿ ಸೇರಲು ಸಾಧ್ಯವಿಲ್ಲ, ಹೀಗಾಗಿ ಚುನಾವಣೆ ಸಮಯದಲ್ಲಿ ಬಿಜೆಪಿ ಸೇರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ಜೂನ್-ಜುಲೈನಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದೆ. ಪರಿಷತ್ ಚುನಾವಣೆಗೂ ಮೊದಲೇ ಬಿಜೆಪಿ ಸೇರುತ್ತೇನೆ. ಈ ದ್ದಾರೆ. ಬೇರೆಯವರು ಪ್ರಚಾರ ಮಾಡುತ್ತಿದ್ದರೆ ಏನೂ ಮಾಡಲು ಆಗುವುದಿಲ್ಲ, ಎಷ್ಟು ದಿನ ಮುಚ್ಚಿಟ್ಟುಕೊಳ್ಳುವುದು, ನಾನು ಬಿಜೆಪಿ ಸೇರುತ್ತೇನೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹೊರಟ್ಟಿ ಅವರು ಬಿಜೆಪಿ ಸೇರುವ ಬಗ್ಗೆ ಇತ್ತೀಚೆಗೆ ವದಂತಿ ಹರಡಿತ್ತು. ಆದರೆ, ಖಚಿತವಾಗಿರಲಿಲ್ಲ. ಅವರು ಪಕ್ಷ ಸೇರಲು ಕೆಲವರು ವಿರೋಧ ಕೂಡ ವ್ಯಕ್ತಪಡಿಸಿದ್ದರು. ಇದೀಗೆ ಹೊರಟ್ಟಿಯವರೇ ಬಿಜೆಪಿ ಸೇರ್ಪಡೆ ಖಚಿತಪಡಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement