ತಂದೆ ಕಳೆದುಕೊಂಡ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ

posted in: ರಾಜ್ಯ | 0

ಬೆಂಗಳೂರು: ತಂದೆ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿಯೊಬ್ಬರು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದಾರೆ.
ನಗರದ ಹತ್ತನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆ ನೋವಿನಲ್ಲಿಯೂ ವೈಷ್ಣವಿ ಪರೀಕ್ಷೆಗೆ ಹಾಜರಾಗಿದ್ದಾರೆ. ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್​ನಲ್ಲಿ ಗಣಿತ ಪರೀಕ್ಷೆ ಬರೆದ ನಂತರ ವಿದ್ಯಾರ್ಥಿನಿ, ಪರೀಕ್ಷೆ ಬಳಿಕ ತಂದೆ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. ವರ್ಷವಿಡೀ ಓದಿದ ಪರೀಕ್ಷೆಗೆ ತೊಂದರೆ ಆಗಬಾರದು ಎಂದು ಪರೀಕ್ಷೆ ಬರೆಯುವಂತೆ ಕುಟುಂಬಸ್ಥರು ಸಲಹೆ ನೀಡಿದ್ದಾರೆ. ಮಧ್ಯಾಹ್ನ 1:45ಕ್ಕೆ ಗಣಿತ ಪರೀಕ್ಷೆ ಮುಗಿಯಲಿದೆ. ವಿದ್ಯಾರ್ಥಿನಿ ಕುಟುಂಬಸ್ಥರು, ವಿದ್ಯಾರ್ಥಿನಿ ಸ್ಥೈರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಇನ್ಫೋಸಿಸ್ ಮುಖ್ಯಸ್ಥರಾಗಿ ಮುಂದಿನ 5 ವರ್ಷಗಳ ವರೆಗೆ ಸಲೀಲ್ ಪರೇಖ್ ಮರುನೇಮಕ
advertisement

ನಿಮ್ಮ ಕಾಮೆಂಟ್ ಬರೆಯಿರಿ