ಬೆಂಗಳೂರು ಹೋಟೆಲುಗಳಲ್ಲಿ ತಿಂಡಿ-ತಿನಿಸು ಮತ್ತಷ್ಟು ದುಬಾರಿ; ಬೆಲೆ ಏರಿಕೆಗೆ ನಿರ್ಧಾರ

posted in: ರಾಜ್ಯ | 0

ಬೆಂಗಳೂರು: ಅಡುಗೆ ಅನಿಲ, ಎಣ್ಣೆ ಹಾಗೂ ಖಾದ್ಯ ತೈಲ ದರ ಹೆಚ್ಚಾದ ಹಿನ್ನೆಲೆಯಲ್ಲಿ  ಬೆಂಗಳೂರು ನಗರದಲ್ಲಿ ಹೋಟೆಲ್‌ ತಿಂಡಿ ತಿನಿಸುಗಳ ಬೆಲೆ ಹೆಚ್ಚಳ ಮಾಡುವುದಾಗಿ ಬೆಂಗಳೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್‌ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕೋವಿಡ್ ಆರ್ಥಿಕ ಸಂಕಷ್ಟದಿಂದಾಗಿ ಹೋಟೆಲ್‌ಗೆ ಬರುವ ಗ್ರಾಹಕರ ಸಂಖ್ಯೆ ಕಡಿಮೆಯಾಗುವ ಆತಂಕದಿಂದ ತಿಂಡಿ-ತಿನಿಸು ದರ ಏರಿಕೆ ಮಾಡಿರಲಿಲ್ಲ.ಸದ್ಯ ಅಡುಗೆ ಎಣ್ಣೆ ಲೀಟರ್‌ಗೆ 200 ರೂ.ಗಳು, ಅಡುಗೆ ಅನಿಲ ಬೆಲೆ ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಾಗಿದೆ. ಪೆಟ್ರೋಲ್‌, ಡೀಸೆಲ್‌ ದರವೂ ಹೆಚ್ಚಾಗಿದೆ. ಹೀಗಾಗಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗಲಿವೆ. ಈ ಕಾರಣಗಳಿಂದ ಹೊಟೇಲ್​ ತಿಂಡಿ-ತಿನಿಸುಗಳ ಬೆಲೆ ಶೇ.10 ರಷ್ಟು ಹೆಚ್ಚಳ ಮಾಡಲಾಗುತ್ತಿದೆ ಎಂದು ಪಿ.ಸಿ ರಾವ್​ ತಿಳಿಸಿದ್ದಾರೆ

advertisement

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಇದೀಗ ಗದಗದಲ್ಲಿ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಬೆಂಗಳೂರಿನಲ್ಲಿ ಹೋಟೆಲ್, ದರ್ಶಿನಿ, ರೆಸ್ಟೊರೆಂಟ್​ಗಳಲ್ಲಿ ಶೇ.10ರಷ್ಟು ದರ ಏರಿಕೆ ಮಾಡುವುದಾಗಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಗ್ರಾಹಕರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಶೇಕಡ 10ರಷ್ಟು ಆಹಾರ ಪದಾರ್ಥಗಳ ಬೆಲೆ ಜಾಸ್ತಿ ಮಾಡಬೇಕೆಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸಭೆ ನಡೆಸಿದ ನಂತರ ಬೆಲೆ ಏರಿಕೆ ನಿರ್ಧಾರ
ಹೋಟೆಲ್​ ತಿಂಡಿ-ತಿನಿಸುಗಳ ಬೆಲೆ ಏರಿಕೆ ಕುರಿತು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ನೇತೃತ್ವದಲ್ಲಿ ಖಾಸಗಿ ಹೊಟೇಲ್​ನಲ್ಲಿ ಸಭೆ ನಡೆಯಿತು. ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.
ಗ್ಯಾಸ್, ಅಡುಗೆ ಎಣ್ಣೆ ನಿರಂತರವಾಗಿ ಏರಿಕೆಯಾಗುತ್ತಿದೆ. ತಿಂಡಿ ಐದು ರೂ. ಕಾಫಿ, ಟೀ ಎರಡು ರೂ.ಗಳಷ್ಟು ಹೆಚ್ಚಳ ಆಗಲಿದೆ. ವಿದ್ಯುತ್ ದರ ಏರಿಕೆಯೂ ಆಗಿರುವುದರಿಂದ ದರ ಏರಿಕೆ ಅನಿವಾರ್ಯ. ಸದ್ಯ ಬೆಂಗಳೂರು ನಗರದಲ್ಲಿ ದರ ಏರಿಕೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.
ಇನ್ನೊಂದು ವಾರದಲ್ಲಿ ಹೋಟೆಲ್‌ನಲ್ಲಿ ಬೆಲೆ ಏರಿಕೆ ಮಾಡಲಾಗುವುದು. ಇನ್ನೊಂದು ವಾರದಲ್ಲಿ ಆಯಾ ಹೋಟೆಲ್‌ನವರು ದರ ಏರಿಕೆ ಮಾಡಲಿದ್ದಾ. ಗ್ರಾಹಕರನ್ನು ಗಮನದಲ್ಲಿ ಇರಿಸಿಕೊಂಡೆ ಬೆಲೆ ಏರಿಕೆ ಮಾಡಿದ್ದೇವೆ. ಯಾವ್ಯಾವ ತಿನಿಸು ಎಷ್ಟೆಷ್ಟು ಏರಿಕೆ ಮಾಡಬೇಕು ಎಂಬ ಬಗ್ಗೆ ಆಯಾ ಹೋಟೆಲ್​ಗಳ ಮಾಲೀಕರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಪ್ರವಾದಿ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ: ಮುಖ್ಯಾಧ್ಯಾಪಕ ಅಮಾನತು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement