ಕಾಶ್ಮೀರ: ಶೋಪಿಯಾನದಲ್ಲಿ ಕಾಶ್ಮೀರಿ ಪಂಡಿತನ ಮೇಲೆ ಉಗ್ರರು ಗುಂಡಿನ ದಾಳಿ

ಕಾಶ್ಮೀರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೋಟೋಗಾಮ್ ಪ್ರದೇಶದಲ್ಲಿ ಸೋಮವಾರ ಸಂಜೆ ಭಯೋತ್ಪಾದಕರು ಕಾಶ್ಮೀರಿ ಪಂಡಿತ ಹಾಗೂ ಅಂಗಡಿ ಮಾಲೀಕನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಗಾಯಗೊಳಿಸಿದ್ದಾರೆ.
ಗಾಯಾಳು ಕಾಶ್ಮೀರಿ ಪಂಡಿತ ಸೋನು ಕುಮಾರ್ ಬಲ್ಜಿ ಎಂದು ಗುರುತಿಸಲಾಗಿದೆ ಹಾಗೂ ಗಂಭೀರ ಸ್ಥಿತಿಯಲ್ಲಿ ಶ್ರೀನಗರದ ಸೇನಾ ಆಸ್ಪತ್ರೆಗೆ ಸಾಗಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ, ಪುಲ್ವಾಮಾದಲ್ಲಿ ನಾಲ್ವರು ಸ್ಥಳೀಯೇತರ ಕಾರ್ಮಿಕರು ಮತ್ತು ಶ್ರೀನಗರದಲ್ಲಿ ಇಬ್ಬರು ಸಿಆರ್‌ಪಿಎಫ್ ಜವಾನರು ಸೇರಿದಂತೆ ಏಳು ಜನರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಗುಂಡಿಕ್ಕಿ ಗಾಯಗೊಳಿಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ಲಾಜೂರ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಇಬ್ಬರು ಸ್ಥಳೀಯರಲ್ಲದ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಪರಿಣಾಮ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬಿಹಾರದ ನಿವಾಸಿಗಳಾದ ಪಟ್ಲೇಶ್ವರ್ ಕುಮಾರ್ ಮತ್ತು ಜಾಕೋ ಚೌಧರಿ ಎಂದು ಗುರುತಿಸಲಾಗಿದೆ.
ಪುಲ್ವಾಮಾದ ನೌಪೋರಾ ಪ್ರದೇಶದಲ್ಲಿ ಪಂಜಾಬ್‌ನ ಇಬ್ಬರು ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ ಗಾಯಗೊಂಡ 24 ಗಂಟೆಗಳ ನಂತರ ಈ ದಾಳಿ ನಡೆದಿದೆ.
ಸೋಮವಾರ, ಶ್ರೀನಗರದ ಮೈಸುಮಾ ಪ್ರದೇಶದಲ್ಲಿ ಸಿಆರ್‌ಪಿಜಿ ಸಿಬ್ಬಂದಿ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು. ಘಟನೆಯಲ್ಲಿ ಓರ್ವ ಯೋಧ ಮೃತಪಟ್ಟಿದ್ದು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ.
ಹತ್ಯೆಯನ್ನು ಖಂಡಿಸಿರುವ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಟ್ವೀಟ್‌ನಲ್ಲಿ, ಕರ್ತವ್ಯದಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧನ ಕುಟುಂಬಕ್ಕೆ ನನ್ನ ಸಂತಾಪವನ್ನು ಕಳುಹಿಸುತ್ತೇನೆ. ಗಾಯಗೊಂಡ ಯೋಧನಿಗಾಗಿ ಪ್ರಾರ್ಥನೆ. ಅವರು ಸಂಪೂರ್ಣ ಚೇತರಿಸಿಕೊಳ್ಳುತ್ತಾರೆ ಎಂಬ ಭರವಸೆ ಇದೆ.
ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಕೂಡ ದಾಳಿಯನ್ನು ಖಂಡಿಸಿದ್ದಾರೆ. “ಈ ಪ್ರಜ್ಞಾಶೂನ್ಯ ಹಿಂಸಾಚಾರವು ಸತ್ತವರ ಅಮಾಯಕ ಕುಟುಂಬಗಳಿಗೆ ದುಃಖವನ್ನುಂಟುಮಾಡುವುದನ್ನು ಹೊರತುಪಡಿಸಿ ಏನನ್ನೂ ನೀಡುವುದಿಲ್ಲ. ಕುಟುಂಬಕ್ಕೆ ನನ್ನ ಸಂತಾಪಗಳು ಮತ್ತು ಗಾಯಗೊಂಡವರಿಗೆ ಪ್ರಾರ್ಥನೆಗಳು” ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement