ವಿಜಯಪುರ: ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದು ಓರ್ವ ಮಹಿಳೆ ಸಾವಿಗೀಡಾದ ಘಟನೆ ಇಲ್ಲಿನ ಪೊಲೀಸ್ ಪರೇಡ್ ಮೈದಾನದ ಬಳಿ ಮಂಗಳವಾರ ನಡೆದಿದೆ. ಅಲ್ಲದೆ, ಐವರಿಗೆ ಗಂಭೀರ ಗಾಯಗಳಾಗಿವೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಸ್ಥಳೀಯ ಸಿದ್ದಾರೂಢ ಕಾಲನಿಯ ನಿವಾಸಿ ಯಲ್ಲಮ್ಮಾ ಕೊಂಡಗೂಳಿ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಟೋ ಚಾಲಕ ಸಚಿನ ರಾಠೋಡ್ ಹಾಗೂ ಇತರ ನಾಲ್ವರು ಮಹಿಳೆಯರಿಗೆ ಗಾಯಗಳಾಗಿವೆ.
ಮದಬಾವಿ ತಾಂಡಾದ ಆಟೋ ಚಾಲಕನ ಸಂಬಂಧಿಕರ ಮನೆಯಲ್ಲಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಚಾಲಕನ ಸ್ಥಿತಿ ಗಂಭೀರವಾಗಿದೆ. ಘಟನೆಯಿಂದ ಕೆಲ ಕಾಲ ಸಂಚಾರ ಬಂದ್ ಆಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ