ಧ್ವನಿವರ್ಧಕ ಮಿತಿ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‌ ಪಂತ್‌

ಬೆಂಗಳೂರು: ಪ್ರಾರ್ಥನಾ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಹೈಕೋರ್ಟ್ ನೀಡಿರುವ ಆದೇಶವನ್ನು ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಮಂಗಳವಾರ ತಿಳಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಸೀದಿ, ಮಂದಿರಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಕಳೆದ ಆರು ತಿಂಗಳ ಹಿಂದೆಯೇ ಹೈಕೋರ್ಟ್ ಆದೇಶ ನೀಡಿದೆ. ಮಸೀದಿ, ಮಂದಿರ ಮಾತ್ರವಲ್ಲ, ಕಾರ್ಖಾನೆ, ಪಬ್‍ಗಳಿಗೂ ಕೂಡ ನೋಟಿಸ್ ನೀಡಲಾಗಿದೆ. ಧಾರ್ಮಿಕ ಮುಖಂಡರ ಜೊತೆ ಸಭೆ ನಡೆಸಿ ಅವರಿಗೂ ಮಾರ್ಗದರ್ಶನ ನೀಡಲಾಗಿದೆ. ಅದರಂತೆ ಧರ್ಮಗುರುಗಳು ನಡೆದುಕೊಂಡಿದ್ದಾರೆ ಎಂದರು.
ಮಾಲಿನ್ಯ ನಿಯಂತ್ರಣ ಮಂಡಳಿಯೂ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ. ನಗರದಲ್ಲಿ ಶಬ್ದ ಮಿತಿ ಉಲ್ಲಂಘಿಸಿದ ಹಲವು ಕಡೆ ಮೈಕ್‍ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, 40ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಾನೂನು ಉಲ್ಲಂಘಿಸಿದರೆ ಮುಂದೆಯೂ ಸಹ ಮೈಕ್‍ಗಳನ್ನು ಜಪ್ತಿ ಮಾಡುತ್ತೇವೆ. ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಮಲ್‍ಪಂತ್ ಅವರು ಎಚ್ಚರಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement